ನವದೆಹಲಿ: ಭಾರತದಲ್ಲಿ 78 ದಿನಗಳಿಗೆ ಬೇಕಾಗುವಷ್ಟು ಕಚ್ಚಾತೈಲ ದಾಸ್ತಾನು ಹೊಂದಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸಂಸದೀಯ ಸಮಿತಿಗೆ ಮಾಹಿತಿ ನೀಡಿದ್ದಾರೆ.

ದೇಶದ ಹಲವು ಭಾಗಗಳಲ್ಲಿ ಪೆಟ್ರೋಲ್ ಖರೀದಿಗಾಗಿ ಉದ್ದನೆಯ ಸರತಿ ಸಾಲು ನಿಲ್ಲುತ್ತಿರುವ ಕುರಿತು ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತದ ಕಡಲು ವ್ಯಾಪಾರ, ಹಡಗು ಮೂಲಸೌಕರ್ಯ, ನಾವಿಕರ ಸುರಕ್ಷತೆ ಕುರಿತಂತೆ ಸಂಸತ್ನ ಸ್ಥಾಯಿ ಸಮಿತಿ (ಸಾರಿಗೆ, ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ) ಪೆಟ್ರೋಲಿಯಂ, ರಾಸಾಯನಿಕ ಇಲಾಖೆಯ ಅಧಿಕಾರಿಗಳು ವಿಸ್ತೃತ ವರದಿ ನೀಡಿದರು. ‘ಹೊರ್ಮುಜ್ ಜಲಸಂಧಿ ಮುಚ್ಚಿರುವ ಕಾರಣ ಭಾರತದ 13 ಹಡಗುಗಳು ಇನ್ನೂ ಕೂಡ ಅಲ್ಲಿಯೇ ಸಿಲುಕಿವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1362530869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.