ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್‌ ಬಿಡಿಭಾಗಗಳ ಆಮದು ಸುಂಕ ಕಡಿತ

Published 31 ಜನವರಿ 2024, 14:06 IST
Last Updated 31 ಜನವರಿ 2024, 14:06 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮೊಬೈಲ್‌ ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರವು ಶೇ 5ರಷ್ಟು ಕಡಿತಗೊಳಿಸಿದೆ. 

ಬ್ಯಾಟರಿ ಕವರ್, ಲೆನ್ಸ್‌ ಸೇರಿದಂತೆ ಇತರೆ ಬಿಡಿಭಾಗಗಳ ಮೇಲೆ ವಿಧಿಸುತ್ತಿದ್ದ ಸುಂಕವನ್ನು ಶೇ 15ರಿಂದ ಶೇ 10ಕ್ಕೆ ಇಳಿಸಲಾಗಿದೆ. ಇದರಿಂದ ಸ್ಥಳೀಯ ಉತ್ಪಾದನೆ ಮತ್ತು ರಫ್ತು ಹೆಚ್ಚಳಕ್ಕೆ ಉತ್ತೇಜನ ಸಿಗಲಿದೆ. ಆ ಮೂಲಕ ಮಾರುಕಟ್ಟೆಯಲ್ಲಿ ಮೊಬೈಲ್‌ಗಳ ಬೆಲೆಯನ್ನು ಕಡಿಮೆಗೊಳಿಸುವುದು ಸರ್ಕಾರದ ಗುರಿಯಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

‘ಸರ್ಕಾರದ ಈ ಕ್ರಮವು ದೇಶದಲ್ಲಿ ಮೊಬೈಲ್‌ ಫೋನ್‌ಗಳ ತಯಾರಿಕೆಗೆ ಪೂರಕವಾಗಿದೆ’ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT