ನವದೆಹಲಿ : ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ಯೂರಿಯಾ ಮತ್ತು ಇತರೆ ರಸಗೊಬ್ಬರಗಳ ಆಮದು ವೆಚ್ಚ ಹೆಚ್ಚಳವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಸಗೊಬ್ಬರ ಗಳ ಸಬ್ಸಿಡಿ ಮೊತ್ತ ₹70 ಸಾವಿರ ಕೋಟಿಯಷ್ಟು ಹೆಚ್ಚಳ ಆಗಬಹುದು ಎಂದು ಕೇಂದ್ರ ರಸಗೊಬ್ಬರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಪರ್ಣಾ ಎಸ್. ಶರ್ಮಾ ತಿಳಿಸಿದ್ದಾರೆ.

2026–27ರ ಆರ್ಥಿಕ ವರ್ಷಕ್ಕೆ ಕೇಂದ್ರ ಸರ್ಕಾರವು ರಸಗೊಬ್ಬರದ ಸಬ್ಸಿಡಿಗೆ ₹1.71 ಲಕ್ಷ ಕೋಟಿ ಹಂಚಿಕೆ ಮಾಡಿದೆ. ಆದರೆ, ಇದು ₹2.41 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಪರ್ಣಾ ಅವರು ಸೋಮವಾರ ಹೇಳಿದ್ದಾರೆ.

ಪ್ರಸಕ್ತ ಮುಂಗಾರು ಅವಧಿಗೆ ದೇಶಕ್ಕೆ 390 ಲಕ್ಷ ಟನ್ ರಸಗೊಬ್ಬರ ಅಗತ್ಯವಿದೆ. ಈ ಪೈಕಿ 200.9 ಲಕ್ಷ ಟನ್ ದಾಸ್ತಾನು ಇದೆ. ಉಳಿದ ಪ್ರಮಾಣವನ್ನು ಆಮದು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದೇಶದಲ್ಲಿ ನಿತ್ಯ ಅಂದಾಜು 80 ಸಾವಿರ ಟನ್ ರಸಗೊಬ್ಬರ ಉತ್ಪಾದನೆ ಆಗುತ್ತಿದೆ. ಪಶ್ಚಿಮ ಏಷ್ಯಾ ಸಂಘರ್ಷ ಆರಂಭವಾದ ಬಳಿಕ ಇಲ್ಲಿಯವರೆಗೆ 86.2 ಲಕ್ಷ ಟನ್ ಉತ್ಪಾದನೆ ಆಗಿದೆ. ಕಳೆದ ವರ್ಷದ ಇದೇ ವೇಳೆ 93 ಲಕ್ಷ ಟನ್ ಉತ್ಪಾದನೆ ಆಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಉತ್ಪಾದನೆಯಲ್ಲಿ ಇಳಿಕೆ ಆಗಿದೆ. ಮುಂದಿನ ತಿಂಗಳುಗಳಲ್ಲಿ ಇದನ್ನು ಸರಿದೂಗಿಸಲಾಗುವುದು ಎಂದು ಹೇಳಿದ್ದಾರೆ.

ಯೂರಿಯಾ ತಯಾರಿಕಾ ಘಟಕಗಳಿಗೆ ಸಾಕಾಗುವಷ್ಟು ಅನಿಲ ಪೂರೈಕೆ ಇದೆ. ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಾಗಣೆಗೆ ಅಡ್ಡಿ ಉಂಟಾಗಿರುವುದರಿಂದ ಬೇರೆ ಮಾರ್ಗಗಳ ಮೂಲಕ ಆಮದು ಮಾಡಿಕೊಳ್ಳಲಾಗುತ್ತದೆ. 22 ಲಕ್ಷ ಟನ್ಗೂ ಅಧಿಕ ರಸಗೊಬ್ಬರವು ದೇಶದ ಬಂದರುಗಳಿಗೆ ಈಗಾಗಲೇ ಬಂದಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.