ಎಫ್‌ಡಿಐ ಶೇ 18ರಷ್ಟು ಹೆಚ್ಚಳ:
ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ದೇಶದಲ್ಲಿನ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಪ್ರಮಾಣ ಶೇ 18ರಷ್ಟು ಹೆಚ್ಚಳವಾಗಿದ್ದು, ₹4.35 ಲಕ್ಷ ಕೋಟಿಯಷ್ಟಾಗಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆ ₹3.70 ಲಕ್ಷ ಕೋಟಿಯಷ್ಟಾಗಿತ್ತು ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.