ನಾಗ್ಪುರ: ‘ದೇಶದ ಮೀನುಗಾರಿಕಾ ಕ್ಷೇತ್ರದ ರಫ್ತು ₹68 ಸಾವಿರ ಕೋಟಿಗೆ ಹೆಚ್ಚಳವಾಗಿದೆ’ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕಾ ಖಾತೆಯ ರಾಜ್ಯ ಸಚಿವ ಸತ್ಯ ಪಾಲ್ ಸಿಂಗ್ ಬಾಘೇಲ್ ಹೇಳಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ದೇಶದ ಮೀನುಗಾರಿಕಾ ಕ್ಷೇತ್ರದ ರಫ್ತನ್ನು ₹1 ಲಕ್ಷ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಶನಿವಾರ ತಿಳಿಸಿದ್ದಾರೆ.

ಸೀಗಡಿ ಸೇರಿದಂತೆ ವಿವಿಧ ರೀತಿಯ ಮೀನುಗಳನ್ನು ಯುರೋಪ್, ಲ್ಯಾಟಿನ್ ಅಮೆರಿಕ, ಪಶ್ಚಿಮ ಏಷ್ಯಾ, ಏಷ್ಯಾ ಸೇರಿದಂತೆ ಜಗತ್ತಿನ ವಿವಿಧ ಪ್ರದೇಶಗಳಿಗೆ ರಫ್ತು ಮಾಡಲಾಗುತ್ತಿದೆ.

ಅಮೆರಿಕವು ಭಾರತದ ಸರಕುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಲು ಆರಂಭಿಸಿದ ಬಳಿಕ, ಸಚಿವಾಲಯವು, ಹೊಸ ಮಾರುಕಟ್ಟೆಗಳನ್ನು ಅನ್ವೇಷಿಸಿತು. ಇದರಿಂದ ದೇಶದ ಮೀನುಗಾರಿಕಾ ಕ್ಷೇತ್ರದ ರಫ್ತು ಶೇ 25ರಷ್ಟು ಹೆಚ್ಚಳವಾಗಿದೆ.

ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ದೇಶದ ಪ್ರಮುಖ ಮೀನುಗಾರಿಕಾ ರಫ್ತು ಕೇಂದ್ರಗಳಾಗಿವೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.