ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

600 ಬಿಲಿಯನ್‌ ಡಾಲರ್‌ಗಿಂತ ಕೆಳಕ್ಕಿಳಿದ ವಿದೇಶಿ ವಿನಿಮಯ ಮೀಸಲು

Last Updated 7 ಮೇ 2022, 14:08 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಏಪ್ರಿಲ್‌ 29ಕ್ಕೆ ಕೊನೆಗೊಂಡ ವಾರದಲ್ಲಿ600 ಬಿಲಿಯನ್ ಡಾಲರ್‌ಗಿಂತ ಕೆಳಕ್ಕೆ ಇಳಿಕೆ ಕಂಡಿದೆ.

ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಏಪ್ರಿಲ್‌ 29ಕ್ಕೆ ಕೊನೆಗೊಂಡ ವಾರದಲ್ಲಿ ₹ 20,713 ಕೋಟಿ ಇಳಿಕೆ ಕಂಡು ₹ 45.68 ಲಕ್ಷ ಕೋಟಿಗೆ (597 ಬಿಲಿಯನ್‌ ಡಾಲರ್) ತಲುಪಿದೆ.

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದಲ್ಲಿ ಇಳಿಕೆ ಕಾಣಲು ರಷ್ಯಾ–ಉಕ್ರೇನ್‌ ಸಂಘರ್ಷ ಪ್ರಮುಖ ಕಾರಣವಾಗಿದೆ.

ಮೀಸಲು ಸಂಗ್ರಹದಲ್ಲಿ ಅತಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹವು ₹ 11,674 ಕೋಟಿಗಳಷ್ಟು ಕಡಿಮೆ ಆಗಿದ್ದು ₹ 40.72 ಲಕ್ಷ ಕೋಟಿಗಳಿಗೆ ಇಳಿಕೆ ಆಗಿದೆ.

ಚಿನ್ನದ ಮೀಸಲು ಸಂಗ್ರಹ ₹ 9,148 ಕೋಟಿ ಕಡಿಮೆ ಆಗಿ ₹ 3.17 ಲಕ್ಷ ಕೋಟಿಗೆ ತಲುಪಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್‌) ಭಾರತದ ಮೀಸಲು ಸಂಗ್ರಹ ₹ 400 ಕೋಟಿ ಇಳಿಕೆ ಕಂಡು ₹ 38,222 ಕೋಟಿಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT