ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಬೆಳವಣಿಗೆಗೆ ಉತ್ತೇಜನ: ಬಂಡವಾಳ ವೆಚ್ಚ ‌ಹೆಚ್ಚಳ ಸಾಧ್ಯತೆ

Last Updated 13 ಜನವರಿ 2023, 19:31 IST
ಅಕ್ಷರ ಗಾತ್ರ

ಮುಂಬೈ: ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಮುಂದಿನ ಹಣಕಾಸು ವರ್ಷಕ್ಕೆ ಬಂಡವಾಳ ವೆಚ್ಚವನ್ನು ಶೇಕಡ 30ರಷ್ಟು ಹೆಚ್ಚಿಸುವ ಸಾಧ್ಯತೆ ಇದ್ದು, ಒಟ್ಟು ವೆಚ್ಚವು ₹ 9 ಲಕ್ಷ ಕೋಟಿಗೆ ತಲುಪಲಿದೆ ಎಂದು ಬರ್ಕ್‌ಲೇಸ್‌ ಸಂಸ್ಥೆ ಹೇಳಿದೆ.

ಕೇಂದ್ರ ಸರ್ಕಾರವು ಫೆಬ್ರುವರಿ 1ರಂದು ಬಜೆಟ್‌ ಮಂಡಿಸಲಿದೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ವರಮಾನ ವೆಚ್ಚ ಒಟ್ಟಾರೆಯಾಗಿ ಸ್ಥಿರವಾಗಿ ಇರುವುದರಿಂದ ಸರ್ಕಾರವು ಬಂಡವಾಳ ವೆಚ್ಚ ಮಾಡುವುದನ್ನು ಮುಂದುವರಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕೇಂದ್ರವು ಮುಂದಿನ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ಶೇ 5.8ರಲ್ಲಿ ನಿಯಂತ್ರಿಸುವ ಗುರಿ ಹೊಂದುವ ನಿರೀಕ್ಷೆ ಇದೆ ಎಂದು ಸಂಸ್ಥೆಯು ಹೇಳಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 6.4ರಷ್ಟು ಆಗುವ ಅಂದಾಜು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT