ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷದಿಂದ 2026–27ರ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ನಿಧಾನವಾಗಲಿದ್ದು, ಶೇ 6.5ರಷ್ಟಾಗಬಹುದು ಎಂದು ಐಸಿಆರ್ಎ ಅಂದಾಜಿಸಿದೆ.

2025-26ರ ಆರ್ಥಿಕ ವರ್ಷದಲ್ಲಿ ಅಂದಾಜಿಸಿದ್ದ ಶೇ 7.5ಕ್ಕಿಂತಲೂ ಕಡಿಮೆಯಾಗಲಿದೆ ಎಂದು ಹೇಳಿದೆ.

ಪಶ್ಚಿಮ ಏಷ್ಯಾದ ಸಂಘರ್ಷದಿಂದ ಇಂಧನ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂಧನ ಲಭ್ಯತೆಯಲ್ಲಿ ಆತಂಕ ಹೆಚ್ಚಿಸಿದೆ. ಇದು ಜಿಡಿಪಿಯ ಬೆಳವಣಿಗೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದೆ.

ಬ್ರೆಂಟ್ ಕಚ್ಚಾ ತೈಲ ದರವು 2026–27ರಲ್ಲಿ ಪ್ರತಿ ಬ್ಯಾರಲ್ಗೆ ಸರಾಸರಿ 85 ಡಾಲರ್ ಆಗಬಹುದು. ಇದರಿಂದ ದೇಶದ ಚಾಲ್ತಿ ಖಾತೆ ಕೊರತೆ ಶೇ 1.7ರಷ್ಟಾಗಬಹುದು. ಸಂಘರ್ಷದಿಂದ ಹಣದುಬ್ಬರ ಹೆಚ್ಚಳವಾಗುವ ನಿರೀಕ್ಷೆಯಿದ್ದು, ಹೆಚ್ಚಿನ ಅನಿಶ್ಚಿತತೆಯು ಗ್ರಾಹಕರ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.