ಶುಕ್ರವಾರ, ಜುಲೈ 1, 2022
22 °C

ಶೇ 5.8ರಷ್ಟು ಜಿಡಿಪಿ ಬೆಳವಣಿಗೆ: ಎಸ್‌ಬಿಐ ಎಕೊವ್ರ್ಯಾಪ್ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಒಟ್ಟು ಆಂತರಿಕ ಉತ್ಪನ್ನವು (ಜಿಡಿಪಿ) ಡಿಸೆಂಬರ್ ತ್ರೈಮಾಸಿಕದಲ್ಲಿ ಶೇಕಡ 5.8ರಷ್ಟು ಬೆಳವಣಿಗೆ ಆಗಿರುವ ಸಾಧ್ಯತೆ ಇದೆ ಎಂದು ಭಾರತೀಯ ಸ್ಟೇಟ್‌ ಬ್ಯಾಂಕ್‌ನ (ಎಸ್‌ಬಿಐ) ಎಕೊವ್ರ್ಯಾಪ್ ವರದಿ ತಿಳಿಸಿದೆ.

ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ 8.4ರಷ್ಟು ಬೆಳವಣಿಗೆ ಕಂಡಿದೆ. ಆದರೆ, ಮೊದಲ ತ್ರೈಮಾಸಿಕದಲ್ಲಿ ಆಗಿದ್ದ ಶೇ 20.1ರಷ್ಟು ಬೆಳವಣಿಗೆಗೆ ಹೋಲಿಸಿದರೆ ಎರಡನೇ ತ್ರೈಮಾಸಿಕದ ಬೆಳವಣಿಗೆ ಕಡಿಮೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮೂರನೇ ತ್ರೈಮಾಸಿಕದ ಜಿಡಿಪಿ ಅಂಕಿ–ಅಂಶವನ್ನು ಫೆಬ್ರುವರಿ 28ರಂದು ಬಿಡುಗಡೆ ಮಾಡಲಿದೆ.

2021–22ನೇ ಹಣಕಾಸು ವರ್ಷಕ್ಕೆ ಜಿಡಿಪಿ ಬೆಳವಣಿಗೆಯು ಶೇ 8.8ರಷ್ಟು ಆಗಲಿದೆ ಎಂದು ಎಸ್‌ಬಿಐ ವರದಿ ಹೇಳಿದೆ. ಜಿಡಿಪಿಯು ಶೇ 9.3ರಷ್ಟು ಆಗಲಿದೆ ಎಂದು ಈ ಹಿಂದೆ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು