ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಾಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಅನುದಾನ?

Last Updated 22 ನವೆಂಬರ್ 2022, 12:33 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಕೇಂದ್ರ ಸರ್ಕಾರವು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಹೆಚ್ಚುವರಿಯಾಗಿ ₹ 24 ಸಾವಿರ ಕೋಟಿಯಷ್ಟು ಅನುದಾನ ಒದಗಿಸುವ ಸಾಧ್ಯತೆ ಇದೆ. ಇದು ಈಗಾಗಲೇ ನಿಗದಿ ಮಾಡಿರುವ ಮೊತ್ತಕ್ಕಿಂತ ಶೇಕಡ 18ರಷ್ಟು ಹೆಚ್ಚು.

ಅನುದಾನ ಹೆಚ್ಚಿಸುವ ಮೂಲಕ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ನರೆಗಾ) ಬಲ ಕೊಡುವ ಉದ್ದೇಶ ಕೇಂದ್ರದ್ದು ಎಂದು ಮೂಲಗಳು ಹೇಳಿವೆ.

ಪ್ರಸಕ್ತ ಹಣಕಾಸು ವರ್ಷಕ್ಕೆ ಕೇಂದ್ರವು ₹ 1.36 ಲಕ್ಷ ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ನಿಗದಿ ಮಾಡಿದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿನ ಆರ್ಥಿಕ ಸಂಕಷ್ಟ ಈಗ ನರೇಗಾ ಅಡಿ ಹೆಚ್ಚಿನ ಉದ್ಯೋಗಕ್ಕೆ ಬೇಡಿಕೆ ಸೃಷ್ಟಿಸಿದೆ. ಹೆಚ್ಚುವರಿ ಮೊತ್ತವನ್ನು ಬಳಸಿ ನರೇಗಾ ಅಡಿ ಉದ್ಯೋಗ ಜಾಸ್ತಿ ಮಾಡುವ ಹಾಗೂ ಕೈಗೆಟಕುವ ದರದ ವಸತಿ ಯೋಜನೆಗಳಿಗೆ ಬಲ ನೀಡುವ ಉದ್ದೇಶ ಇದೆ.

ಈ ವಿಚರವಾಗಿ ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಹೆಚ್ಚುವರಿ ಅನುದಾನಕ್ಕೆ ಕೇಂದ್ರವು ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಅನುಮೋದನೆ ಕೋರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT