ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದಲ್ಲೇ ನಾಲ್ಕನೆಯ ಅತಿಹೆಚ್ಚಿನ ವಿದೇಶಿ ವಿನಿಮಯ ಮೀಸಲು: ಪಂಜಕ್ ಚೌಧರಿ

Last Updated 6 ಡಿಸೆಂಬರ್ 2021, 22:10 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ಬಳಿ ಈಗ ಇರುವ ವಿದೇಶಿ ವಿನಿಮಯ ಮೀಸಲಿನ ಮೊತ್ತವು ವಿಶ್ವದಲ್ಲಿಯೇ ನಾಲ್ಕನೆಯ ಅತಿಹೆಚ್ಚಿನದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಜಕ್ ಚೌಧರಿ ಅವರು ಲೋಕಸಭೆಗೆ ತಿಳಿಸಿದ್ದಾರೆ.

ನವೆಂಬರ್‌ 19ರ ಅಂಕಿ–ಅಂಶದ ಪ್ರಕಾರ ದೇಶದಲ್ಲಿ ₹ 48.24 ಲಕ್ಷ ಕೋಟಿ ವಿದೇಶಿ ವಿನಿಮಯ ಮೀಸಲು ಇದೆ ಎಂದು ಅವರು ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಆಗಿರುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ಮತ್ತು ಎಕ್ಸೈಸ್‌ ಸುಂಕ ಸಂಗ್ರಹದ ಮೊತ್ತವು ₹ 16.7 ಲಕ್ಷ ಕೋಟಿ ಎಂದು ಅವರು ಇನ್ನೊಂದು ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT