ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕಿದೆ ಶೀಘ್ರ ಆರ್ಥಿಕ ಬೆಳವಣಿಗೆ ಹೊಂದುವ ಸಾಮರ್ಥ್ಯ: ಬಿಲ್ ಗೇಟ್ಸ್

Last Updated 17 ನವೆಂಬರ್ 2019, 15:27 IST
ಅಕ್ಷರ ಗಾತ್ರ

ನವದೆಹಲಿ:‘ಮುಂದಿನ ದಶಕದಲ್ಲಿ ಕ್ಷಿಪ್ರವಾಗಿ ಆರ್ಥಿಕ ಬೆಳವಣಿಗೆ ಸಾಧಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ’ ಎಂದು ಮೈಕ್ರೊಸಾಫ್ಟ್‌ನ ಸಹ ಸ್ಥಾಪಕ ಬಿಲ್‌ ಗೇಟ್ಸ್‌ ಹೇಳಿದ್ದಾರೆ.

‘ಭಾರತವು ಮುಂದಿನ 10 ವರ್ಷಗಳಲ್ಲಿ ಅತ್ಯಂತ ತ್ವರಿತಗತಿಯಲ್ಲಿ ಆರ್ಥಿಕ ಬೆಳವಣಿಗೆ ದಾಖಲಿಸಿದೆ. ಇದರಿಂದ ಅಸಂಖ್ಯ ಜನರು ಬಡತನದಿಂದ ಹೊರ ಬರಲಿದ್ದಾರೆ. ಸರ್ಕಾರವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಹಣ ವೆಚ್ಚ ಮಾಡಲು ಆದ್ಯತೆ ನೀಡಲಿದೆ’ ಎಂದು ಅವರು ಹೇಳಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಯಾಗಿರುವ ಮತ್ತು ದಾನ ಧರ್ಮದ ವಿಷಯದಲ್ಲಿ ಮುಂಚೂಣಿಯಲ್ಲಿರುವ ಗೇಟ್ಸ್‌ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಭವಿಷ್ಯ ನುಡಿದಿದ್ದಾರೆ.

ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯು ತೀವ್ರ ಸ್ವರೂಪದ ಮಂದಗತಿಯ ಪ್ರಗತಿ ಕಾಣುತ್ತಿದೆ. ಆರ್ಥಿಕ ಚಟುವಟಿಕೆಗಳು ತೀವ್ರ ಏರಿಳಿತ ಕಾಣುತ್ತಿರುವ ಸಂದರ್ಭದಲ್ಲಿಯೇ ಗೇಟ್ಸ್‌ ಅವರು ಸಕಾರಾತ್ಮಕ ಮುನ್ನೋಟ ನೀಡಿದ್ದಾರೆ.

‘ಅಲ್ಪಾವಧಿಯಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆಯ ಹಾದಿ ಬಗ್ಗೆ ನನ್ನಲ್ಲಿ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಮುಂದಿನ ದಶಕದಲ್ಲಿ ಕ್ಷಿಪ್ರ ಬೆಳವಣಿಗೆ ದಾಖಲಿಸುವ ಬಗ್ಗೆ ಖಚಿತವಾಗಿ ಹೇಳಬಲ್ಲೆ. ಈ ಬಗ್ಗೆ ಪ್ರತಿಯೊಬ್ಬರೂ ಆಶಾವಾದಿ ಆಗಿರಬೇಕು. ಗರಿಷ್ಠ ವೇಗದಲ್ಲಿ ಪ್ರಗತಿ ಸಾಧಿಸುವ ಸಕಲ ಸಾಮರ್ಥ್ಯವನ್ನು ಭಾರತ ಹೊಂದಿದೆ’ ಎಂದು ಹೇಳಿದ್ದಾರೆ.

ಹಣಕಾಸು ಸೇವೆ, ಔಷಧಿ ತಯಾರಿಕೆ ಕ್ಷೇತ್ರದಲ್ಲಿನ ಭಾರತದ ಸಾಧನೆಯನ್ನೂ ಅವರು ಶ್ಲಾಘಿಸಿದ್ದಾರೆ. ಆಧಾರ ಗುರುತಿನ ವ್ಯವಸ್ಥೆಯನ್ನೂ ಹೊಗಳಿದ್ದಾರೆ.

ತಮ್ಮ ಫೌಂಡೇಷನ್‌ನ ಕೆಲಸಗಳ ಪ್ರಗತಿ ಗಮನಿಸಲು ಅವರು ಭಾರತಕ್ಕೆ ಬಂದಿದ್ದಾರೆ. ಮೂರು ದಿನಗಳ ಕಾಲ ಇಲ್ಲಿ ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT