ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋಬ್ಸ್‌ ಸಿರಿವಂತರ ಪಟ್ಟಿಯಲ್ಲಿ ಮುಕೇಶ್‌ ಅಂಬಾನಿಗೆ 10ನೇ ಸ್ಥಾನ

Last Updated 7 ಏಪ್ರಿಲ್ 2021, 6:39 IST
ಅಕ್ಷರ ಗಾತ್ರ

ನ್ಯೂಯಾರ್ಕ್: ರಿಲಯನ್ಸ್‌ ಇಂಡಸ್ಟ್ರೀಜ್‌ನ ಚೇರಮನ್‌ ಮುಕೇಶ್‌ ಅಂಬಾನಿ ಅವರು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದು, ಚೀನಾದ ಉದ್ಯಮಿ ಜಾಕ್‌ ಮಾ ಅವರನ್ನೂ ಹಿಂದಿಕ್ಕಿದ್ದಾರೆ.

ಪ್ರತಿಷ್ಠಿತ ಫೋಬ್ಸ್‌ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ.

ಅಮೆರಿಕ ಹಾಗೂ ಚೀನಾ ನಂತರ ಗರಿಷ್ಠ ಸಂಖ್ಯೆಯ ಕೋಟ್ಯಧೀಶರನ್ನು ಹೊಂದಿರುವ ರಾಷ್ಟ್ರ ಭಾರತ ಎಂದು ಫೋಬ್ಸ್‌ ಬಿಡುಗಡೆ ಮಾಡಿರುವ ವಿಶ್ವದ ಸಿರಿವಂತರ ಕುರಿತ 35ನೇ ವಾರ್ಷಿಕ ಪಟ್ಟಿಯಲ್ಲಿ ಹೇಳಲಾಗಿದೆ.

ಅಂಬಾನಿ ಅವರು ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದು, ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 84.5 ಶತಕೋಟಿ ಡಾಲರ್‌ ಎಂದು ಪತ್ರಿಕೆ ಹೇಳಿದೆ.

ಅಮೆಜಾನ್‌ನ ಸಿಇಒ ಹಾಗೂ ಸಂಸ್ಥಾಪಕ ಜೆಫ್‌ ಬಿಜೋಸ್‌ ಅವರು ಸತತ ನಾಲ್ಕನೇ ವರ್ಷವೂ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ 177 ಶತಕೋಟಿ ಡಾಲರ್‌ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅವರ ಆಸ್ತಿಯಲ್ಲಿ 64 ಶತಕೋಟಿ ಡಾಲರ್‌ ಏರಿಕೆ ಕಂಡು ಬಂದಿದೆ ಎಂದು ವಿವರಿಸಲಾಗಿದೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್‌ ಸಂಸ್ಥಾಪಕ ಇಲಾನ್‌ ಮಸ್ಕ್‌ ಇದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 151 ಶತಕೋಟಿ ಡಾಲರ್‌.

‘ಟೆಸ್ಲಾ ಷೇರುಗಳ ಮೌಲ್ಯ ಶೇ 705ರಷ್ಟು ಏರಿಕೆಯಾಗಿರುವುದೇ ಮಸ್ಕ್‌ ಅವರ ಆಸ್ತಿ ಮೌಲ್ಯದಲ್ಲಿ ಹೆಚ್ಚಳವಾಗಲು ಕಾರಣ’ ಎಂದು ಫೋಬ್ಸ್‌ ವಿಶ್ಲೇಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT