ನವದೆಹಲಿ: 5 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯನ್ನು ಕೇಂದ್ರ ಸರ್ಕಾರ ಹೆಚ್ಚು ಮಾಡಿದೆ. ಅಲ್ಲದೆ, ಕೊಳವೆ ಮೂಲಕ ನೈಸರ್ಗಿಕ ಅನಿಲವನ್ನು (ಪಿಎನ್ಜಿ) ಗ್ರಾಹಕರಿಗೆ ತಲುಪಿಸಲು ಕೊಳವೆ ಜಾಲ ನಿರ್ಮಾಣ ಕೆಲಸಕ್ಕೆ ಚುರುಕು ನೀಡಿದೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕಾರಣದಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ಅಡಚಣೆ ಉಂಟಾದ ನಂತರದಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

5 ಕೆ.ಜಿ. ತೂಕದ 13 ಲಕ್ಷಕ್ಕೂ ಹೆಚ್ಚಿನ ಎಲ್ಪಿಜಿ ಸಿಲಿಂಡರ್ಗಳನ್ನು ಮಾರ್ಚ್ 23ರ ನಂತರ ಮಾರಾಟ ಮಾಡಲಾಗಿದೆ. ಈಗ ದಿನವೊಂದಕ್ಕೆ ಈ ಸಿಲಿಂಡರ್ಗಳ ಮಾರಾಟವು 1 ಲಕ್ಷಕ್ಕಿಂತ ಹೆಚ್ಚಾಗಿದೆ. ವಲಸೆ ಕಾರ್ಮಿಕರು ಹಾಗೂ ಕಡಿಮೆ ಆದಾಯದ ಕುಟುಂಬಗಳಿಗೆ ಇವುಗಳ ಲಭ್ಯತೆಯನ್ನು ಹೆಚ್ಚು ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮಾರ್ಚ್ ನಂತರದಲ್ಲಿ ಒಟ್ಟು 4.24 ಲಕ್ಷ ಹೊಸ ಪಿಎನ್ಜಿ ಸಂಪರ್ಕಗಳನ್ನು ಸಕ್ರಿಯಗೊಳಿಸಲಾಗಿದೆ. ಅಲ್ಲದೆ, ಪಿಎನ್ಜಿ ಸಂಪರ್ಕ ಪಡೆಯುವ ಪ್ರಕ್ರಿಯೆಯ ಭಾಗವಾಗಿ 30 ಸಾವಿರಕ್ಕೂ ಹೆಚ್ಚು ಗ್ರಾಹಕರು ತಮ್ಮ ಎಲ್ಪಿಜಿ ಸಂಪರ್ಕವನ್ನು ಕಂಪನಿಗಳಿಗೆ ಮರಳಿಸಿದ್ದಾರೆ.

ಮನೆಗಳಲ್ಲಿ ಅಡುಗೆಗೆ ಬಳಸುವ ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಿರವಾಗಿದೆ, ಏಪ್ರಿಲ್ 11ರಂದು 52 ಲಕ್ಷಕ್ಕಿಂತ ಹೆಚ್ಚು ಸಿಲಿಂಡರ್ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1626995752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.