ನವದೆಹಲಿ (ಪಿಟಿಐ): ದೇಶದ ತಯಾರಿಕಾ ವಲಯದ ಚಟುವಟಿಕೆ ಏಪ್ರಿಲ್ ತಿಂಗಳಿನಲ್ಲಿ ಸ್ವಲ್ಪ ಏರಿಕೆ ಕಂಡಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆಯ ಮಾಸಿಕ ಸಮೀಕ್ಷೆ ಸೋಮವಾರ ತಿಳಿಸಿದೆ.

ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆಯು ನಿರ್ವಹಿಸುವ ‘ಎಚ್ಎಸ್ಬಿಸಿ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕ’ವು (ಪಿಎಂಐ) ಮಾರ್ಚ್ನಲ್ಲಿ 53.9 ಇತ್ತು. ಏಪ್ರಿಲ್ನಲ್ಲಿ ಅದು 54.7ಕ್ಕೆ ಏರಿಕೆ ಆಗಿದೆ ಎಂದು ಹೇಳಿದೆ.

ವಲಯದ ಸರಕುಗಳಿಗೆ ಹೊಸ ಕಾರ್ಯಾದೇಶ ಬರುವುದು ಮತ್ತು ಉತ್ಪಾದನೆಯು ಹೆಚ್ಚಳವಾಗಿದೆ. ಇದು ವಲಯದ ಬೆಳವಣಿಗೆಗೆ ಕಾರಣ ಎಂದು ತಿಳಿಸಿದೆ.

ಸೂಚ್ಯಂಕವು 50ರ ಮೇಲಿದ್ದರೆ ಸಕಾರಾತ್ಮಕ ಬೆಳವಣಿಗೆ ಎಂದು ಅರ್ಥೈಸಲಾಗುತ್ತದೆ. 50ಕ್ಕಿಂತ ಕಡಿಮೆ ಇದ್ದರೆ ಅದನ್ನು ಕುಸಿತವೆಂದು ಕಾಣಲಾಗುತ್ತದೆ.

‘ಏಪ್ರಿಲ್ನಲ್ಲಿ ತಯಾರಿಕಾ ವಲಯದ ಚಟುವಟಿಕೆ ಪ್ರಗತಿ ಸಾಧಿಸಿದೆ. ಆದರೆ, ಇದು ನಾಲ್ಕು ವರ್ಷಗಳಲ್ಲಿ ಎರಡನೇ ಅತಿ ನಿಧಾನವಾದ ಬೆಳವಣಿಗೆ ಆಗಿದೆ’ ಎಂದು ಎಚ್ಎಸ್ಬಿಸಿ ಇಂಡಿಯಾದ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್ ಭಂಡಾರಿ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಹಣದುಬ್ಬರದ ಮೇಲೆ ಪರಿಣಾಮ ಬೀರಿದೆ. ಇದರಿಂದ ತಯಾರಿಕಾ ವೆಚ್ಚ ಹೆಚ್ಚಳವು ನಾಲ್ಕು ವರ್ಷಗಳ ತ್ವರಿತ ಏರಿಕೆಯನ್ನು ದಾಖಲಿಸಿದೆ. ಉದ್ಯೋಗ ಸೃಷ್ಟಿ ಸ್ವಲ್ಪ ಹೆಚ್ಚಳವಾಗಿದೆ. ಆಸ್ಟ್ರೇಲಿಯಾ, ಫ್ರಾನ್ಸ್, ಜಪಾನ್, ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಿಂದ ಬೇಡಿಕೆ ಉತ್ತಮವಾಗಿತ್ತು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-1326447067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.