ನವದೆಹಲಿ: ದೇಶದಲ್ಲಿ ಮುಂದಿನ ಐದು ವರ್ಷಗಳಲ್ಲಿ ಹೊಸ ನಿಲ್ದಾಣ ಸೇರಿದಂತೆ 50 ವಿಮಾನ ನಿಲ್ದಾಣಗಳ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಪ್ರಸ್ತುತ 159 ವಿಮಾನ ನಿಲ್ದಾಣಗಳು ಕಾರ್ಯಾಚರಣೆ ನಡೆಸುತ್ತಿವೆ.

‘ನಾಗರಿಕ ವಿಮಾನಯಾನ ವಲಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವಾಗಿ ವಿಮಾನಯಾನ ಕಂಪನಿಗಳಿಗೆ ಬೆಂಬಲ ನೀಡಲಾಗುವುದು. ಜೊತೆಗೆ, ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ಸಂಖ್ಯೆ ಹೆಚ್ಚಳಕ್ಕೆ ಒತ್ತು ನೀಡಲಾಗುವುದು’ ಎಂದು ಸಚಿವಾಲಯದ ಕಾರ್ಯದರ್ಶಿ ವುಮ್ಲುನ್ಮಾಂಗ್ ವುಯಲ್ನಾಮ್ ತಿಳಿಸಿದ್ದಾರೆ.

ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಡಿ ನಿಲ್ದಾಣಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಲಿದೆ. ಹೊಸ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸುವತ್ತಲೂ ದೃಷ್ಟಿ ಹರಿಸಲಾಗಿದೆ. ನಿಗದಿತ ಭೂಮಿ ನೀಡುವುದು ರಾಜ್ಯ ಸರ್ಕಾರಗಳ ಹೊಣೆಯಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.