ನವದೆಹಲಿ (ಪಿಟಿಐ): ಆಹಾರ ಪದಾರ್ಥಗಳ ಬೆಲೆ ಏರಿಕೆಯ ಕಾರಣದಿಂದಾಗಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣವು ಏಪ್ರಿಲ್ ತಿಂಗಳಿನಲ್ಲಿ ಶೇ 3.48ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಮಂಗಳವಾರ ತಿಳಿಸಿದೆ.

ಮಾರ್ಚ್ನಲ್ಲಿ ಚಿಲ್ಲರೆ ಹಣದುಬ್ಬರವು ಶೇ 3.40ರಷ್ಟು ದಾಖಲಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯು ಶೇ 3.87ರಷ್ಟಿತ್ತು. ಇದು ಏಪ್ರಿಲ್ನಲ್ಲಿ ಶೇ 4.2ಕ್ಕೆ ಹೆಚ್ಚಳವಾಗಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹಣದುಬ್ಬರವು ಕ್ರಮವಾಗಿ ಶೇ 3.74 ಮತ್ತು ಶೇ 3.16ರಷ್ಟಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು ಶೇ 4.6ರಷ್ಟಾಗಲಿದೆ ಮತ್ತು ಮೊದಲ ತ್ರೈಮಾಸಿಕದಲ್ಲಿಶೇ 4ರಷ್ಟಿರಲಿದೆ ಎಂದು ಕಳೆದ ತಿಂಗಳು ಆರ್ಬಿಐ ಅಂದಾಜಿಸಿತ್ತು.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಇಂಧನ ಬೆಲೆ ಮತ್ತು ಎಲ್ ನಿನೊದಿಂದ ಹಣದುಬ್ಬರವು ಹೆಚ್ಚಳವಾಗಲಿದೆ ಎಂದು ಸಹ ಅದು ಹೇಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1360097410

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.