ನವದೆಹಲಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 463.5 ಲಕ್ಷ ಟನ್ ಭತ್ತ ಖರೀದಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಕೇಂದ್ರ ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶದ ಆಹಾರ ಇಲಾಖೆಯ ಕಾರ್ಯದರ್ಶಿಗಳು ಮತ್ತು ಭಾರತೀಯ ಆಹಾರ ನಿಗಮದ (ಎಫ್ಸಿಐ) ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ 2025–26ರ ಅಕ್ಟೋಬರ್ನಿಂದ ಆರಂಭವಾಗುವ ಮುಂಗಾರು ಹಂಗಾಮಿನ ಮಾರುಕಟ್ಟೆ ಋತುವಿನಲ್ಲಿ, ಬೆಳೆಗಳ ಖರೀದಿ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

19.19 ಲಕ್ಷ ಟನ್ ಧಾನ್ಯದ (ಶ್ರೀ ಅನ್ನ) ಖರೀದಿಯ ಅಂದಾಜನ್ನು ನಿಗದಿಪಡಿಸಲಾಗಿದೆ. ಬೆಳೆಗಳ ವೈವಿಧ್ಯೀಕರಣ ಮತ್ತು ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸಲು ರಾಗಿ ಬೆಳೆ ಖರೀದಿಯತ್ತ ಗಮನಹರಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.