‘ಕೇಂದ್ರದ ಹೊಸ ಅಸ್ತ್ರ’
‘ತೆರಿಗೆ ಹಂಚಿಕೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ), ಪ್ರಕೃತಿ ವಿಕೋಪ ಪರಿಹಾರದಲ್ಲಿ ಅನ್ಯಾಯ, ಹೊಸ ಶಿಕ್ಷಣ ನೀತಿ. ಯುಜಿಸಿ ನಿಯಮಾವಳಿಗಳಿಗೆ ತಿದ್ದುಪಡಿಯೂ ಸೇರಿದಂತೆ ಕೇಂದ್ರ ಸರ್ಕಾರದ ಪ್ರತಿಯೊಂದು ಕ್ರಮವೂ ರಾಜ್ಯವನ್ನು ಶಿಕ್ಷಿಸುವ ದುರುದ್ದೇಶದಿಂದ ಕೂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ‘ಈ ಎಲ್ಲ ಅನ್ಯಾಯಗಳ ವಿರುದ್ಧ ರಾಷ್ಟ್ರಮಟ್ಟದಲ್ಲಿ ದನಿ ಎತ್ತದಂತೆ ಮಾಡಲು, ಸಂಸತ್‌ನಲ್ಲಿ ದಕ್ಷಿಣದ ರಾಜ್ಯಗಳ ದನಿಯನ್ನು ಇನ್ನಷ್ಟು ಕ್ಷೀಣಗೊಳಿಸುವ ದುರುದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಕ್ಷೇತ್ರ ಮರುವಿಂಗಡಣೆಯ ಹೊಸ ಅಸ್ತ್ರವನ್ನು ಎತ್ತಿಕೊಂಡು ಹೊರಟಿದೆ’ ಎಂದಿದ್ದಾರೆ.