ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲವೇ ವರ್ಷಗಳಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತಕ್ಕೆ 3ನೇ ಸ್ಥಾನ: ನಿರ್ಮಲಾ

Published 16 ಮಾರ್ಚ್ 2024, 16:04 IST
Last Updated 16 ಮಾರ್ಚ್ 2024, 16:04 IST
ಅಕ್ಷರ ಗಾತ್ರ

ತಿರುಚನಾಪಳ್ಳಿ (ಪಿಟಿಐ): ಭಾರತವು ಕೆಲವೇ ವರ್ಷಗಳಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ತಿಳಿಸಿದರು.

ಇದೇ ಸಂದರ್ಭದಲ್ಲಿ, ಅಭಿವೃದ್ಧಿ ಹೊಂದಿದ ದೇಶದ ಸ್ಥಾನಮಾನವನ್ನು 2047ರ ವೇಳೆಗೆ ಸಾಧಿಸಲು ಆರ್ಥಿಕ ಸ್ವಾತಂತ್ರ್ಯದ ಅಗತ್ಯವಿದೆ. ಸದ್ಯ ಭಾರತ, ಅತಿದೊಡ್ಡ ಆರ್ಥಿಕತೆ ಹೊಂದಿರುವ ಜಗತ್ತಿನ ಐದನೇ ದೇಶವಾಗಿದೆ ಎಂದು ಹೇಳಿದರು.

ಶ್ರೀಮತಿ ಇಂದಿರಾಗಾಂಧಿ ಕಾಲೇಜಿನಲ್ಲಿ ಸ್ಥಾಪಿಸಲಾದ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಮಾಡಿ ಮಾತನಾಡಿದ ಅವರು, ‘ಆರ್ಥಿಕ ವಿಚಾರಗಳಲ್ಲಿ ಭಾರತ ಆತ್ಮನಿರ್ಭರತೆಯನ್ನು ಸಾಧಿಸಬೇಕಿದೆ. ಇದೇ ಮುಂದೆ ಆರ್ಥಿಕ ಶಕ್ತಿಯಾಗಲಿದೆ. ದೇಶವು ಜಾಗತಿಕ ಆರ್ಥಿಕತೆಯಲ್ಲಿ 10ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿದೆ. ಕೆಲವೇ ವರ್ಷಗಳಲ್ಲಿ ಮೂರನೇ ಸ್ಥಾನ ಪಡೆಯಲಿದೆ’ ಎಂದು ಹೇಳಿದರು.

‘ನಿಮ್ಮಂಥ ವಿದ್ಯಾರ್ಥಿಗಳ ಪ್ರಯತ್ನದಿಂದ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT