ನವದೆಹಲಿ: ಸೆಮಿಕಂಡಕ್ಟರ್ ಪೂರೈಕೆ ವ್ಯವಸ್ಥೆಯನ್ನು ಸ್ಥಾಪಿಸಲು ಭಾರತ ಮತ್ತು ಅಮೆರಿಕ ಶುಕ್ರವಾರ ಒಪ್ಪಂದಕ್ಕೆ ಸಹಿ ಮಾಡಿವೆ. ಈ ಒಪ್ಪಂದದ ಕಾರಣದಿಂದಾಗಿ ಭಾರತದ ಎಲೆಕ್ಟ್ರಾನಿಕ್ಸ್ ತಯಾರಿಕಾ ವ್ಯವಸ್ಥೆಯು ಬಲಗೊಳ್ಳುವ ನಿರೀಕ್ಷೆ ಇದೆ. ಅಲ್ಲದೆ, ಇದರಿಂದಾಗಿ ಈ ವಲಯದಲ್ಲಿ ಚೀನಾ ಹೊಂದಿರುವ ಪ್ರಾಬಲ್ಯ ಕುಗ್ಗಬಹುದು ಎನ್ನಲಾಗಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹಾಗೂ ಅಮೆರಿಕದ ವಾಣಿಜ್ಯ ಸಚಿವೆ ಗಿನಾ ರೈಮಂಡೊ ಅವರು ಒಪ್ಪಂದಕ್ಕೆ ಸಹಿ ಮಾಡಿದರು. ‘ಎಲೆಕ್ಟ್ರಾನಿಕ್ಸ್ ಪೂರೈಕೆ ವ್ಯವಸ್ಥೆಯಲ್ಲಿ ಹೆಚ್ಚಿನ ಪಾತ್ರ ವಹಿಸುವ ಆಕಾಂಕ್ಷೆಯನ್ನು ಭಾರತ ಹೊಂದಿದೆ. ಅದು ಈಡೇರುವುದನ್ನು ಅಮೆರಿಕ ಬಯಸುತ್ತದೆ. ಈ ಆಕಾಂಕ್ಷೆಯನ್ನು ಈಡೇರಿಸಲು ಒಪ್ಪಂದವು ನೆರವಾಗುತ್ತದೆ’ ಎಂದು ರೈಮಂಡೊ ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ಆಟೊಮೊಬೈಲ್, ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆಯಲ್ಲಿ ಸೆಮಿಕಂಡಕ್ಟರ್‌ಗಳ ಬಳಕೆ ವ್ಯಾಪಕವಾಗಿದೆ. ಆದರೆ ಸೆಮಿಕಂಡಕ್ಟರ್‌ಗಳ ಕೊರತೆಯ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಹಲವು ಉದ್ದಿಮೆಗಳು ಸಮಸ್ಯೆ ಎದುರಿಸಿವೆ. ಈಗ ಆಗಿರುವ ಒಪ್ಪಂದದ ನೆರವಿನಿಂದಾಗಿ ಭಾರತ ಮತ್ತು ಅಮೆರಿಕ ನಡುವಿನ, ಸೆಮಿಕಂಡಕ್ಟರ್ ಪೂರೈಕೆ ವ್ಯವಸ್ಥೆಯಲ್ಲಿನ ಅಡೆತಡೆಗಳು ನಿವಾರಣೆಯಾಗುವ ನಿರೀಕ್ಷೆ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.