ನವದೆಹಲಿ : ‘ಭಾರತ ಮತ್ತು ಅಮೆರಿಕ ಮಧ್ಯೆ ನಡೆಯುತ್ತಿರುವ ವ್ಯಾಪಾರ ಒಪ್ಪಂದದ ಮಾತುಕತೆಯಿಂದಾಗಿ ಕೃಷಿ ವಲಯಕ್ಕೆ ಪೆಟ್ಟು ಬೀಳಲಿದೆ. ಆ ದೇಶದ ಕೃಷಿ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುವಂತಾಗುತ್ತದೆ. ಇದರಿಂದ ನಮ್ಮ ದೇಶದ ರೈತರಿಗೆ ಅನನುಕೂಲವಾಗಲಿದೆ’ ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಶನಿವಾರ ಹೇಳಿತು.

ಕಿಸಾನ್ ಸಭಾವು ಸ್ಥಾಪನೆಗೊಂಡು 90 ವರ್ಷ ಕಳೆದಿದ್ದರ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಪಿಎಂ ನಾಯಕ ಪ್ರಕಾಶ್ ಕಾರಟ್ ಮಾತನಾಡಿ, ‘ಕಾರ್ಪೊರೇಟ್ ಪೂರಕ ನೀತಿಗಳು ಮತ್ತು ಭಾರತದ ಕೃಷಿ ಕ್ಷೇತ್ರದ ಮೇಲೆ ಹೊರಗಿನವರ ಒತ್ತಡದಿಂದಾಗಿ ನಮ್ಮ ರೈತರಿಗೆ ಹೊಡೆತ ಬೀಳಲಿದೆ’ ಎಂದರು.

‘ಇಲ್ಲಿಯವರೆಗೆ ಕೃಷಿ ಕ್ಷೇತ್ರದಲ್ಲಿ ನಾವು ಆಮದು ಮಾಡಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇದು ಘಟಿಸುತ್ತಿರು ವಂತೆ ಸೂಚನೆಗಳು ದೊರೆಯುತ್ತಿವೆ’ ಎಂದರು. ‘ಅಮೆರಿಕ–ಭಾರತ ವ್ಯಾಪಾರ ಒಪ್ಪಂದ ಮತ್ತು ಇಂಥ ಕಾರ್ಪೊರೇಟ್ ನೀತಿಗಳ ವಿರುದ್ಧ ನಾವು ನಮ್ಮ ಅಭಿಯಾನವನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ’ ಎಂದು ಎಐಕೆಎಸ್ ಪ್ರಧಾನ ಕಾರ್ಯದರ್ಶಿ ವಿಜೋ ಕೃಷ್ಣನ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-2130934617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.