ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನಯಾನ ಕಂಪನಿಗಳು, ನಿಲ್ದಾಣಗಳಿಗೆ ₹ 22,400 ಕೋಟಿ ನಷ್ಟ

Last Updated 5 ಆಗಸ್ಟ್ 2021, 15:21 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕದಿಂದಾಗಿ 2020–21ನೇ ಹಣಕಾಸು ವರ್ಷದಲ್ಲಿ ದೇಶದ ವಿಮಾನಯಾನ ಕಂಪನಿಗಳು ಮತ್ತು ವಿಮಾನ ನಿಲ್ದಾಣಗಳಿಗೆ ಒಟ್ಟು ₹ 22,400 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದರಲ್ಲಿ ಕಂಪನಿಗಳಿಗೆ ಆಗಿರುವ ನಷ್ಟವು ₹ 19 ಸಾವಿರ ಕೋಟಿ, ವಿಮಾನ ನಿಲ್ದಾಣಗಳಿಗೆ ಆಗಿರುವ ನಷ್ಟದ ಮೊತ್ತವು ₹ 3,400 ಕೋಟಿ.

ವಿಮಾನ ನಿಲ್ದಾಣ ಪ್ರಾಧಿಕಾರವು (ಎಐಐ) 2019ರ ಏಪ್ರಿಲ್‌–ಜೂನ್‌ ಅವಧಿಯಲ್ಲಿ ₹ 2,976 ಕೋಟಿ ವರಮಾನವು ಗಳಿಸಿತ್ತು. 2021ರ ಏಪ್ರಿಲ್‌–ಜೂನ್‌ ಅವಧಿಯಲ್ಲಿ ವರಮಾನವು ₹ 889 ಕೋಟಿಗೆ ಇಳಿದಿದೆ ಎಂದು ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್‌ ಅವರು ಗುರುವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಸಾಂಕ್ರಾಮಿಕದಿಂದಾಗಿ ಜಾಗತಿಕ ಮಟ್ಟದಲ್ಲಿ ವಿಮಾನಯಾನ ವಲಯವು ಹೆಚ್ಚಿನ ಪರಿಣಾಮ ಎದುರಿಸುವಂತಾಗಿದೆ. ದೇಶದಲ್ಲಿಯೂ ವಿಮಾನಯಾನ ಕಂಪನಿಗಳು, ವಿಮಾನ ನಿಲ್ದಾಣಗಳು ಮತ್ತು ಅದಕ್ಕೆ ಸಂಬಂಧಿಸಿದ ಸೇವಾ ಕಂಪನಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT