ಶನಿವಾರ, ನವೆಂಬರ್ 28, 2020
25 °C

ಭಾರತದ ಆರ್ಥಿಕತೆ ನಿರೀಕ್ಷೆಗೂ ಮೀರಿ ಚೇತರಿಕೆ: ಆಕ್ಸ್‌ಫರ್ಡ್‌ ಎಕನಾಮಿಕ್ಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಆರ್ಥಿಕತೆಯು ನಿರೀಕ್ಷೆಗೂ ಮೀರಿ ಅತಿ ವೇಗದಲ್ಲಿ ಚೇತರಿಸಿಕೊಳ್ಳುತ್ತಿದೆ ಎಂದು ಜಾಗತಿಕ ಸಂಸ್ಥೆಯಾದ ಆಕ್ಸ್‌ಫರ್ಡ್‌ ಎಕನಾಮಿಕ್ಸ್‌' ಅಭಿಪ್ರಾಯಪಟ್ಟಿದೆ.

ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಹಣದುಬ್ಬರವು ಸರಾಸರಿ ಶೇಕಡ 6ಕ್ಕಿಂತ ಹೆಚ್ಚಾಗಿರಲಿದೆ ಎಂದು ವಿಶ್ಲೇಷಿಸಿದೆ.

‘ಹಣದುಬ್ಬರವು ಅಕ್ಟೋಬರ್‌ ತಿಂಗಳಲ್ಲಿ ಕೋವಿಡ್‌ ಪೂರ್ವದಲ್ಲಿ ಇದ್ದ ಸ್ಥಿತಿಗೆ ಬಂದಿದೆ. ಇಂಧನ ಹೊರತುಪಡಿಸಿ ಇತರ ವಸ್ತುಗಳ ಬೆಲೆಗಳಲ್ಲಿ ಏರಿಕೆಯಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಹಣದುಬ್ಬರವು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ಅದು ತಿಳಿಸಿದೆ.

ತರಕಾರಿಗಳು ಮತ್ತು ಮೊಟ್ಟೆಗಳು ದುಬಾರಿಯಾಗಿರುವುದರಿಂದ ಹಣದುಬ್ಬರವು ಅಕ್ಟೋಬರ್‌ನಲ್ಲಿ ಹೆಚ್ಚಾಗಿದೆ. ಸೆಪ್ಟೆಂಬರ್‌ನಲ್ಲಿ 7.27 ಹಣದುಬ್ಬರವಿತ್ತು. ಇದೇ ವೇಳೆ, ವಿವಿಧ ರೀತಿಯ ಚಟುವಟಿಕೆಗಳಿಗೆ ಚಾಲನೆ ದೊರೆತಿರುವುದರಿಂದ ಮತ್ತು ಇವುಗಳಿಂದ ದೊರೆತ ಆರ್ಥಿಕ ಪರಿಸ್ಥಿತಿಯ ಮಾಹಿತಿಯನ್ನು ವಿಶ್ಲೇಷಿಸಿದಾಗ ಆರ್ಥಿಕತೆಯು ನಿರೀಕ್ಷೆಗೂ ಮೀರಿ ಚೇತರಿಸಿಕೊಳ್ಳುತ್ತಿದೆ ಎಂದು ಆಕ್ಸ್‌ಫರ್ಡ್‌ ಎಕನಾಮಿಕ್ಸ್‌ ತಿಳಿಸಿದೆ.

ಮೂಡಿಸ್‌ ಇನ್ವೆಸ್ಟರ್‌ ಸರ್ವಿಸ್‌ ಸಹ ಒಟ್ಟು ಆಂತರಿಕ ಉತ್ಪಾದನೆ (ಜಿಡಿಪಿ) ಸಹ ಹೆಚ್ಚಳವಾಗಲಿದೆ ಎಂದು ವಿಶ್ಲೇಷಿಸಿದೆ. ರಾಷ್ಟ್ರಾದ್ಯಂತ ಸುದೀರ್ಘ ಅವಧಿಗೆ ಹೇರಿದ್ದ ಲಾಕ್‌ಡೌನ್‌ನಿಂದ ಆರ್ಥಿಕತೆ ಪುನಶ್ಚೇತನದ ಹಾದಿಯಲ್ಲಿ ಸಾಗುತ್ತಿದೆ. ಆದರೆ, ಕ್ರಮಬದ್ಧವಾಗಿ ಸಾಗುತ್ತಿಲ್ಲ ಎಂದು ಅದು ಅಭಿಪ್ರಾಯಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು