ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆಯು ಶೇ 6.5ರಿಂದ ಶೇ 6.8ರಷ್ಟು ಪ್ರಗತಿ ಕಾಣುವ ನಿರೀಕ್ಷೆ ಇದೆ ಎಂದು ಡೆಲಾಯ್ಟ್ ಕಂಪನಿಯ ವರದಿ ಭಾನುವಾರ ತಿಳಿಸಿದೆ.

ಜನರಿಂದ ಸರಕು ಮತ್ತು ಸೇವೆಗಳನ್ನು ಖರೀದಿಸುವ ಸಾಮರ್ಥ್ಯ ಹೆಚ್ಚಳವಾಗಿದೆ. ಇದು ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲಿದೆ. ಇದರಿಂದಾಗಿ 2025–26ನೇ ಆರ್ಥಿಕ ವರ್ಷದಲ್ಲಿ ಜಿಡಿಪಿಯು ಶೇ 6.7ರಿಂದ ಶೇ 7.3ರಷ್ಟು ದಾಖಲಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಸಕ್ತ ಆರ್ಥಿಕ ವರ್ಷದ ಜಿಡಿಪಿ ಬೆಳವಣಿಗೆಯನ್ನು ಶೇ 7.2ರಿಂದ ಶೇ 6.6ಕ್ಕೆ ತಗ್ಗಿಸಿದೆ.

‘ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಬೆಳವಣಿಗೆಯು ನಿರೀಕ್ಷೆ ಮಾಡಿದ್ದಕ್ಕಿಂತಲೂ ಕಡಿಮೆ ದಾಖಲಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಅನಿಶ್ಚಿತತೆ, ನಿರೀಕ್ಷೆಗೂ ಮೀರಿ ಸುರಿದ ಅಧಿಕ ಮಳೆ ಹಾಗೂ ಜಾಗತಿಕ ಬಿಕ್ಕಟ್ಟು ಇದಕ್ಕೆ ಕಾರಣವಾಗಿವೆ. ಇದು ದೇಶೀಯ ಬೇಡಿಕೆ ಹಾಗೂ ರಫ್ತು ಚಟುವಟಿಕೆ ಮೇಲೂ ಪರಿಣಾಮ ಬೀರಿವೆ’ ಎಂದು ಡೆಲಾಯ್ಟ್ ಇಂಡಿಯಾದ ಅರ್ಥಶಾಸ್ತ್ರಜ್ಞೆ ರುಮ್ಕಿ ಮಜುಂದಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.