ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್‌ ಉದ್ಯಮ ಶೇ 9ರಷ್ಟು ಬೆಳವಣಿಗೆ ನಿರೀಕ್ಷೆ

Published 26 ಫೆಬ್ರುವರಿ 2024, 15:44 IST
Last Updated 26 ಫೆಬ್ರುವರಿ 2024, 15:44 IST
ಅಕ್ಷರ ಗಾತ್ರ

ಕೋಲ್ಕತ್ತ: 2024–25ನೇ ಹಣಕಾಸು ವರ್ಷದಲ್ಲಿ ದೇಶದ ಹೋಟೆಲ್‌ ಉದ್ಯಮದ ವರಮಾನವು ಶೇ 7ರಿಂದ ಶೇ 9ರ ವರೆಗೆ ಹೆಚ್ಚಳವಾಗಲಿದೆ ಎಂದು ಕ್ರೆಡಿಟ್ ರೇಟಿಂಗ್ ಸಂಸ್ಥೆ ಐಸಿಆರ್‌ಎ ಅಂದಾಜಿಸಿದೆ.

ಲೋಕಸಭಾ ಚುನಾವಣೆ ಸಮಯದ ಹೊರತಾಗಿಯೂ ಪ್ರಯಾಣ, ಸಭೆಗಳ ಆಯೋಜನೆಗೆ ಬೇಡಿಕೆ ಹೆಚ್ಚಿದೆ. ಸಮ್ಮೇಳನ ಮತ್ತು ವಸ್ತು ಪ್ರದರ್ಶನಗಳಂತಹ ಕಾರ್ಯಕ್ರಮಗಳು ಈ ವಲಯದ ಬೇಡಿಕೆಯನ್ನು ಹೆಚ್ಚಿಸಲಿವೆ ಎಂದು ಹೇಳಿದೆ.

2023–24ನೇ ಹಣಕಾಸು ವರ್ಷದಲ್ಲಿ ಹೋಟೆಲ್‌ ಕೊಠಡಿಗಳ ಸರಾಸರಿ ದರವು ₹7,200ರಿಂದ ₹7,400ಕ್ಕೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಮುಂದಿನ ಹಣಕಾಸು ವರ್ಷದಲ್ಲಿ ಈ ದರವು ₹7,800ರಿಂದ ₹8,000ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT