ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎ.ಐ. ವಿಭಾಗದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ

Published 1 ಮೇ 2023, 18:44 IST
Last Updated 1 ಮೇ 2023, 18:44 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಮುಂದಿನ ದಿನಗಳಲ್ಲಿ ಹೊಸದಾಗಿ ಸೃಷ್ಟಿಯಾಗಲಿರುವ ಉದ್ಯೋಗಗಳಲ್ಲಿ ಹೆಚ್ಚಿನವು ಕೃತಕ ಬುದ್ಧಿಮತ್ತೆ (ಎ.ಐ) ಮತ್ತು ಮೆಷಿನ್ ಲರ್ನಿಂಗ್ ವಲಯದಲ್ಲಿ ಇರಲಿವೆ ಎಂದು ವಿಶ್ವ ಆರ್ಥಿಕ ವೇದಿಕೆ ಸಿದ್ಧಪಡಿಸಿರುವ ವರದಿಯೊಂದು ಹೇಳಿದೆ. 

ಮುಂದಿನ ಐದು ವರ್ಷಗಳಲ್ಲಿ ಭಾರತದ ಉದ್ಯೋಗ ಮಾರುಕಟ್ಟೆಯಲ್ಲಿ ಹೊಸ ಉದ್ಯೋಗಗಳು ಸೃಷ್ಟಿಯಾಗುವ ಹಾಗೂ ಹಳೆಯ ಕೆಲವು ಉದ್ಯೋಗಗಳು ನಿರುಪಯುಕ್ತವಾಗುವ ಪ್ರಮಾಣವು ಶೇಕಡ 22ರಷ್ಟು ಇರಲಿದೆ ಎಂದು ವರದಿ ಅಂದಾಜಿಸಿದೆ.

2027ಕ್ಕೆ ಮೊದಲು ವಿಶ್ವದ ಉದ್ಯೋಗ ಮಾರುಕಟ್ಟೆಯಲ್ಲಿ 6.9 ಕೋಟಿ ಉದ್ಯೋಗಗಳು ಸೃಷ್ಟಿಯಾಗಲಿವೆ, 8.3 ಕೋಟಿ ಉದ್ಯೋಗಗಳು ಕಣ್ಮರೆಯಾಗಲಿವೆ ಎಂದು ವರದಿಯು ಅಂದಾಜು ಮಾಡಿದೆ. ಅಂದರೆ ಒಟ್ಟು ಉದ್ಯೋಗ ಸಂಖ್ಯೆಯು ಜಗತ್ತಿನಾದ್ಯಂತ 1.4 ಕೋಟಿಯಷ್ಟು ಕಡಿಮೆ ಆಗಲಿದೆ.

ಈ ವರದಿ ಸಿದ್ಧಪಡಿಸಲು ಒಟ್ಟು 803 ಕಂಪನಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ. ಶೇಕಡ 50ರಷ್ಟು ಕಂಪನಿಗಳು ಕೃತಕ ಬುದ್ಧಿಮತ್ತೆಯಿಂದಾಗಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಭಾವಿಸಿವೆ. ಆದರೆ ಶೇ 25ರಷ್ಟು ಕಂಪನಿಗಳು, ಕೃತಕ ಬುದ್ಧಿಮತ್ತೆಯು ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಎಂದು ಅಂದಾಜು ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT