ನವದೆಹಲಿ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ನ (ಐಒಸಿ) ಸೆಪ್ಟೆಂಬರ್ ತ್ರೈಮಾಸಿಕದ ಲಾಭವು ಹಲವು ಪಟ್ಟು ಹೆಚ್ಚಾಗಿ ₹7,610 ಕೋಟಿಗೆ ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ಲಾಭವು ₹180 ಕೋಟಿ ಆಗಿತ್ತು.

ಈ ತ್ರೈಮಾಸಿಕದಲ್ಲಿ ಕಂಪನಿಯ ಇಂಧನ ಮಾರಾಟ ಪ್ರಮಾಣ ಶೇ 6ರಷ್ಟು ಹೆಚ್ಚಾಗಿದೆ. ಕಚ್ಚಾ ತೈಲ ಸಂಸ್ಕರಣೆಯ ಪ್ರಮಾಣವು ಶೇ 5ರಷ್ಟು ಹೆಚ್ಚಾಗಿದೆ.

ನಿರ್ಬಂಧ ಪಾಲನೆ: ‘ಎಲ್ಲ ಬಗೆಯ ನಿರ್ಬಂಧಗಳನ್ನು ಪಾಲಿಸಲಾಗುವುದು’ ಎಂದು ಐಒಸಿ ಅಧ್ಯಕ್ಷ ಅರವಿಂದರ್ ಸಿಂಗ್ ಸಾಹ್ನಿ ಹೇಳಿದ್ದಾರೆ. ಆದರೆ, ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದರ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಐಒಸಿ ದೇಶದ ಅತಿದೊಡ್ಡ ತೈಲ ಕಂಪನಿ. ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ಐಒಸಿ ಆಮದು ಮಾಡಿಕೊಂಡ ಕಚ್ಚಾ ತೈಲದಲ್ಲಿ ರಷ್ಯಾದಿಂದ ಬಂದ ಕಚ್ಚಾ ತೈಲದ ಪಾಲು ಶೇ 21ರಷ್ಟಿದೆ.

ಭಾರತದ ಕಚ್ಚಾ ತೈಲ ಸಂಸ್ಕರಣಾ ಕಂಪನಿಗಳು ಆಮದು ಮೂಲವನ್ನು ಹೆಚ್ಚಿಸಿಕೊಳ್ಳಲು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಆರಂಭಿಸಿವೆ. ಅವು ಕೊಲಂಬಿಯಾ, ಕೆನಡಾ ಮತ್ತು ಪಶ್ಚಿಮ ಏಷ್ಯಾದಿಂದ ಆಮದು ಮಾಡಿಕೊಳ್ಳುವುದನ್ನು ಹೆಚ್ಚಿಸಿವೆ.

ಭಾರತದ ಕಂಪನಿಗಳು ರಷ್ಯಾದಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಪ್ರತಿದಿನ 16.8 ಲಕ್ಷ ಬ್ಯಾರಲ್ ಆಗಿತ್ತು. ಇದು ಜೂನ್ ತ್ರೈಮಾಸಿಕದ ಆಮದು ಪ್ರಮಾಣಕ್ಕೆ ಹೋಲಿಸಿದರೆ ಶೇ 13ರಷ್ಟು ಕಡಿಮೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.