ಗುರುವಾರ , ಆಗಸ್ಟ್ 11, 2022
20 °C

ಇಂಡಿಯನ್‌ ಆಯಿಲ್‌ನಿಂದ ಪ್ರೀಮಿಯಂ ಗ್ರೇಡ್‌ ಪೆಟ್ರೋಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಲಿಮಿಟೆಡ್‌ (ಐಒಸಿಎಲ್‌) ವಿಶ್ವ ದರ್ಜೆಯ ಪ್ರೀಮಿಯಂ ಗ್ರೇಡ್‌ ಪೆಟ್ರೋಲ್‌ (100 ಆಕ್ಟೇನ್‌) ಅನ್ನು ದೇಶದಲ್ಲಿ ಬಿಡುಗಡೆ ಮಾಡಿದೆ.

‘ಮೊದಲ ಹಂತದಲ್ಲಿ ದೆಹಲಿ, ಗುರುಗ್ರಾಮ, ನೊಯಿಡಾ, ಆಗ್ರಾ, ಜೈಪುರ, ಚಂಡೀಗಢ, ಮುಂಬೈ, ಪುಣೆ ಮತ್ತು ಅಹಮದಾಬಾದ್‌ನ ಆಯ್ದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಲಭ್ಯವಾಗಲಿದೆ. ಎರಡನೇ ಹಂತದಲ್ಲಿ ಚೆನ್ನೈ, ಬೆಂಗಳೂರು, ಹೈದರಾಬಾದ್‌, ಕೋಲ್ಕತ್ತ ಮತ್ತು ಭುವನೇಶ್ವರದಲ್ಲಿ
ಲಭ್ಯವಾಗಲಿದೆ’ ಎಂದು ಇಂಡಿಯನ್‌ ಆಯಿಲ್‌ನ ಅಧ್ಯಕ್ಷ ಶ್ರೀಕಾಂತ್‌ ಮಾಧವ ವೈದ್ಯ ತಿಳಿಸಿದರು.

ಪ್ರಸ್ತುತ ದೇಶದಲ್ಲಿ ಮಾರಾಟವಾಗುತ್ತಿರುವ ಸಾಮಾನ್ಯ ಪೆಟ್ರೋಲ್‌ 91 ಆಕ್ಟೇನ್‌ ಆಗಿದೆ.

‘100 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಟೇನ್‌ ಸಂಖ್ಯೆಯ ಪೆಟ್ರೋಲ್‌ ಮಾರಾಟ ಮಾಡುವ ವಿಶ್ವದ ಆಯ್ದ ದೇಶಗಳ ಸಾಲಿಗೆ ಭಾರತವೂ ಸೇರಿಕೊಂಡಿದೆ’ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು