ಮಂಗಳವಾರ, ಸೆಪ್ಟೆಂಬರ್ 21, 2021
22 °C

ನಕಾರಾತ್ಮಕ ಮಟ್ಟದಲ್ಲಿ ಸೇವಾ ವಲಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ಸೇವಾ ವಲಯವು ಸತತ ಮೂರನೇ ತಿಂಗಳಿನಲ್ಲಿಯೂ ನಕಾರಾತ್ಮಕ ಹಾದಿಯಲ್ಲಿಯೇ ಉಳಿದಿದೆ ಎಂದು ಐಎಚ್‌ಎಸ್‌ ಮರ್ಕಿಟ್‌ ಇಂಡಿಯಾ ಸಂಸ್ಥೆ ಹೇಳಿದೆ.

ಕೋವಿಡ್‌ ಸಾಂಕ್ರಾಮಿಕವನ್ನು ನಿಯಂತ್ರಿಸಲು ಸ್ಥಳೀಯವಾಗಿ ನಿರ್ಬಂಧಗಳನ್ನು ಜಾರಿಗೊಳಿಸಿದ್ದರಿಂದ ಜುಲೈನಲ್ಲಿಯೂ ಸೇವಾ ವಲಯದ ಚಟುವಟಿಕೆಗಳು ಇಳಿಕೆ ಕಂಡಿವೆ ಎಂದು ಅದು ತಿಳಿಸಿದೆ.

ಸೇವಾ ವಲಯದ ಚಟುವಟಿಕೆಗಳನ್ನು ಸೂಚಿಸುವ ಸೂಚ್ಯಂಕವು ಜೂನ್‌ನಲ್ಲಿ 41.2 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜುಲೈನಲ್ಲಿ 45.4ಕ್ಕೆ ಏರಿಕೆ ಆಗಿದೆ. ಹೀಗಿದ್ದರೂ ಸೂಚ್ಯಂಕವು 50ಕ್ಕಿಂತ ಕೆಳಮಟ್ಟದಲ್ಲಿ ಇದ್ದರೆ ಅದನ್ನು ನಕಾರಾತ್ಮಕ ಬೆಳವಣಿಗೆ ಎಂದು ಪರಿಗಣಿಸಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.