ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ಫೋನ್ ಮಾರಾಟ ಶೇ 10ರಷ್ಟು ಇಳಿಕೆ; ಮೂರು ವರ್ಷಗಳ ಕನಿಷ್ಠ ಮಟ್ಟ

Last Updated 14 ನವೆಂಬರ್ 2022, 18:56 IST
ಅಕ್ಷರ ಗಾತ್ರ

ನವದೆಹಲಿ: ಸ್ಮಾರ್ಟ್‌ಫೋನ್‌ ಮಾರಾಟ 2022ರ ಜುಲೈ–ಸೆಪ್ಟೆಂಬರ್‌ ಅವಧಿಯಲ್ಲಿ ಶೇಕಡ 10ರಷ್ಟು ಇಳಿಕೆ ಆಗಿದ್ದು 4.3 ಕೋಟಿಯಷ್ಟು ಆಗಿದೆ. ಮೂರು ವರ್ಷಗಳ ಕನಿಷ್ಠ ಮಟ್ಟ ಇದಾಗಿದೆ. ಮಾರುಕಟ್ಟೆ ಸಂಶೋಧನಾ ಸಂಸ್ಥೆ ಇಂಟರ್‌ನ್ಯಾಷನಲ್‌ ಡೇಟಾ ಕಾರ್ಪೊರೇಷನ್‌ (ಐಡಿಸಿ) ಈ ಮಾಹಿತಿ ನೀಡಿದೆ.

ಮಾರಾಟ ಆಗಿರುವ ಒಟ್ಟು ಫೋನ್‌ಗಳಲ್ಲಿ 5ಜಿ ಸ್ಮಾರ್ಟ್‌ಫೋನ್‌ಗಳ ಸಂಖ್ಯೆ 1.60 ಕೋಟಿ. ಬೇಡಿಕೆ ಕಡಿಮೆ ಇರುವುದು ಹಾಗೂ ಸ್ಮಾರ್ಟ್‌ಫೋನ್‌ಗಳ ಬೆಲೆ ಏರಿಕೆಯು ಹಬ್ಬದ ಖರೀದಿ ಮೇಲೆ ನಕಾರಾತ್ಮಕ ಪರಿಣಾಮ ಬೀರಿತು ಎಂದು ವರದಿಯಲ್ಲಿ ತಿಳಿಸಿದೆ.

ಶಿಯೋಮಿ ಶೇ 21.2ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು ಮೊದಲ ಸ್ಥಾನದಲ್ಲಿದೆ. ಸ್ಯಾಮ್ಸಂಗ್‌ ಎರಡನೇ ಸ್ಥಾನ ಪಡೆದುಕೊಂಡಿದೆ. ಪ್ರೀಮಿಯಂ ವಿಭಾಗದಲ್ಲಿ ಶೇ 63ರಷ್ಟು ಮಾರುಕಟ್ಟೆ ಪಾಲು ಹೊಂದುವ ಮೂಲಕ ಆ್ಯಪಲ್‌ ಮೊದಲ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT