ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರಗಳು ಸಿಂಧು

Last Updated 1 ಜೂನ್ 2018, 9:24 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಬೇಕಿರುವ ಚುನಾವಣೆಗೆ ಸಲ್ಲಿಸಿದ್ದ 11 ಅಧಿಕೃತ ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ.

ಬಿಜೆಪಿಯಿಂದ ಎಸ್‌.ರುದ್ರೇಗೌಡ, ಕೆ.ಪಿ.ನಂಜುಂಡಿ, ಎನ್‌.ರವಿಕುಮಾರ್‌, ತೇಜಸ್ವಿನಿಗೌಡ ಮತ್ತು ರಘುನಾಥ ಮಲ್ಕಾಪುರೆ, ಕಾಂಗ್ರೆಸ್‌ನಿಂದ ಕೆ.ಹರೀಶ್‌ ಕುಮಾರ್‌, ಅರವಿಂದ ಕುಮಾರ್‌ ಅರಳಿ, ಕೆ.ಗೋವಿಂದರಾಜ್‌ ಮತ್ತು ಸಿ.ಎಂ.ಇಬ್ರಾಹಿಂ, ಜೆಡಿಎಸ್‌ನಿಂದ ಬಿ.ಎಂ.ಫಾರೂಕ್ ಮತ್ತು ಎಸ್.ಎಲ್.ಧರ್ಮೇಗೌಡ ಗುರುವಾರ ನಾಮಪತ್ರ ಸಲ್ಲಿಸಿದ್ದರು

10 ಶಾಸಕರು ಸೂಚಕರಾಗಿ ಸಹಿ ಹಾಕದೇ ಇರುವ ಕಾರಣಕ್ಕೆ ಸಂಗಮೇಶ್‌ ಅವರ ನಾಮಪತ್ರ ತಿರಸ್ಕೃತವಾಗಿದೆ. ಹೀಗಾಗಿ ಬಿಜೆಪಿ 5, ಕಾಂಗ್ರೆಸ್ 4, ಜೆಡಿಎಸ್‌ನ ಇಬ್ಬರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ನಾಮಪತ್ರ ವಾಪಸ್ ಪಡೆಯುವ ಅವಧಿ‌ ಮುಗಿದ ಬಳಿಕ ಆಯ್ಕೆಯಾದವರ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಜಂಟಿ ಕಾರ್ಯದರ್ಶಿ ಎ.ಎಸ್.‌ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT