ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ತಯಾರಿಕಾ ಚಟುವಟಿಕೆಯಲ್ಲಿ ಅಲ್ಪ ಇಳಿಕೆ: ಎಸ್‌ ಆ್ಯಂಡ್‌ ಪಿ ಗ್ಲೋಬಲ್‌

Published 2 ಮೇ 2024, 16:40 IST
Last Updated 2 ಮೇ 2024, 16:40 IST
ಅಕ್ಷರ ಗಾತ್ರ

ನವದೆಹಲಿ: ದೇಶದ ತಯಾರಿಕೆ ಚಟುವಟಿಕೆಯು ಮಾರ್ಚ್‌ಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಅಲ್ಪ ಇಳಿಕೆ ಕಂಡಿದೆ. ಆದರೆ, ಬೆಲೆ ಏರಿಕೆ ನಡುವೆಯೂ ಉತ್ಪನ್ನಗಳಿಗೆ ಬೇಡಿಕೆಯು ನಿರೀಕ್ಷಿತ ಮಟ್ಟದಲ್ಲಿ ಹೆಚ್ಚಳವಾಗಿದೆ ಎಂದು ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ಸಂಸ್ಥೆ ತಿಳಿಸಿದೆ.‌

ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ) ಮಾರ್ಚ್‌ನಲ್ಲಿ 59.1 ಏರಿಕೆ ಕಂಡು, 16 ವರ್ಷಗಳ ಗರಿಷ್ಠ ಮಟ್ಟಕ್ಕೆ ದಾಖಲಾಗಿತ್ತು. ಏಪ್ರಿಲ್‌ನಲ್ಲಿ 58.8ಕ್ಕೆ ಇಳಿದಿದೆ. ಆದರೂ, ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳವಾಗಿರುವುದರಿಂದ ಕಳೆದ ಮೂರು ವರ್ಷದಲ್ಲಿ ತಯಾರಿಕಾ ವಲಯವು ಎರಡನೇ ಬಾರಿಗೆ ಉತ್ತಮ ಸಾಧನೆ ತೋರಿದೆ.

ಸೂಚ್ಯಂಕವು 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿದ್ದರೆ ಸಕಾರಾತ್ಮಕ ಬೆಳವಣಿಗೆ ಎಂದು  ಪರಿಗಣಿಸಲಾಗುತ್ತದೆ. 50ಕ್ಕಿಂತಲೂ ಕೆಳಗಿನ ಮಟ್ಟದಲ್ಲಿ ದಾಖಲಾದರೆ ನಕಾರಾತ್ಮಕವೆಂದು ಪರಿಗಣಿಸಲಾಗುತ್ತದೆ.

ಏಪ್ರಿಲ್‌ನಲ್ಲಿ ತಯಾರಿಕೆ, ರಫ್ತು, ಖರೀದಿ ಸಾಮರ್ಥ್ಯವು ಸದೃಢವಾಗಿದೆ. ಈ ಆರೋಗ್ಯಕರ ಬೇಡಿಕೆಯು ಮಾರುಕಟ್ಟೆಯ ಬೆಳವಣಿಗೆಗೆ ನೆರವಾಗಿದೆ ಎಂದು ಗುರುವಾರ ಬಿಡುಗಡೆಯಾಗಿರುವ ವರದಿ ಹೇಳಿದೆ.

ಹೊಸ ರಫ್ತು ಆರ್ಡರ್‌ಗಳ ಸಂಖ್ಯೆ ಹೆಚ್ಚಿದೆ. ಆದರೆ, ಒಟ್ಟು ಮಾರಾಟ ದರವು ಮಂದಗತಿಯಲ್ಲಿದೆ. ಆದರೆ, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಹೆಚ್ಚಳವಾಗಿದೆ. ಏಷ್ಯಾ, ಆಸ್ಟ್ರೇಲಿಯಾ, ಯುರೋಪ್‌ ಹಾಗೂ ಅಮೆರಿಕದಿಂದ ಹೊಸ ಆರ್ಡರ್‌ ಮತ್ತು ಮಾರಾಟ ಹೆಚ್ಚಿದೆ ಎಂದು ವಿವರಿಸಿದೆ.

ಬೇಡಿಕೆಗೆ ಅನುಗುಣವಾಗಿ ನಿರೀಕ್ಷಿತ ಗುರಿ ಸಾಧನೆಗಾಗಿ ತಯಾರಕರು ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

‘ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳವಾಗಿರುವುದು ಉತ್ಪಾದನಾ ಚಟುವಟಿಕೆಗಳ ವಿಸ್ತರಣೆಗೆ ಸಹಕಾರಿಯಾಗಲಿದೆ’ ಎಂದು ಎಚ್‌ಎಸ್‌ಬಿಸಿಯ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್‌ ಭಂಡಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT