ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿಯಲ್ಲಿ ಶೇ 20ರವರೆಗೆ ಎಫ್‌ಡಿಐ ಅನುಮತಿ

ಐಪಿಒ ಪ್ರಕ್ರಿಯೆ ಇನ್ನಷ್ಟು ಸುಗಮಗೊಳಿಸಲು ನಿಮಯದಲ್ಲಿ ತಿದ್ದುಪಡಿ
Last Updated 26 ಫೆಬ್ರುವರಿ 2022, 11:27 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್‌ಐಸಿ) ಶೇಕಡ 20ರವರೆಗೆ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಪನಿಯ ಆರಂಭಿಕ ಸಾರ್ವಜನಿಕ ಕೊಡುಗೆಗೆ (ಐಪಿಒ) ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ದೇಶದ ಅತಿದೊಡ್ಡ ವಿಮಾ ಕಂಪನಿಯಾಗಿರುವ ಎಲ್‌ಐಸಿ ಮುಂದಿನ ತಿಂಗಳು ಐಪಿಒ ಮೂಲಕ ಶೇಕಡ 5ರಷ್ಟು ಷೇರುಗಳನ್ನು ಮಾರಾಟ ಮಾಡಲಿದ್ದು, ₹ 60 ಸಾವಿರ ಕೋಟಿ ಬಂಡವಾಳ ಸಂಗ್ರಹಿಸುವ ಗುರಿ ಇಟ್ಟುಕೊಂಡಿದೆ.

ಈ ತಿದ್ದುಪಡಿಯಿಂದಾಗಿ ವಿದೇಶಿ ನೇರ ಹೂಡಿಕೆದಾರರು ಸರ್ಕಾರದ ಪೂರ್ವಾನುಮತಿ ಇಲ್ಲದೆಯೇ (ಆಟೊಮೆಟಿಕ್‌ ರೂಟ್‌ ಮೂಲಕ) ಶೇ 20ರವರೆಗೆ ಎಲ್ಐಸಿ ಷೇರುಗಳನ್ನು ಖರೀದಿಸಲು ಅವಕಾಶ ಸಿಗಲಿದೆ ಎಂದು ಹೆಸರು ಬಹಿರಂಗಪಡಿಸಬಾರದು ಎಂಬ ಷರತ್ತಿನೊಂದಿಗೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಇರುವ ನಿಯಮಗಳ ಪ್ರಕಾರ, ಎಲ್‌ಐಸಿಯಲ್ಲಿ ವಿದೇಶಿ ಹೂಡಿಕೆಗೆ ಅವಕಾಶ ಇಲ್ಲ. ಇತರೆ ಖಾಸಗಿ ವಿಮಾ ಕಂಪನಿಗಳಲ್ಲಿ ಶೇ 74ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ಇದೆ.

ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಷೇರುಪೇಟೆಯಲ್ಲಿ ಅಸ್ಥಿರ ವಹಿವಾಟು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್‌ಐಸಿಯ ಐಪಿಒ ಪ್ರಕ್ರಿಯೆಯನ್ನು ಮುಂದೂಡಬಹುದು ಎಂದು ಕೆಲವು ಹೂಡಿಕೆದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಚಿವ ಸಂಪುಟವು ಎಫ್‌ಡಿಐ ನಿಯಮದಲ್ಲಿ ತಿದ್ದುಪಡಿ ತಂದಿದೆ ಎಂದು ಹೇಳಿದ್ದಾರೆ.

ಎಲ್‌ಐಸಿ ಐಪಿಒ ಮುಂದೂಡುವ ಯಾವುದೇ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT