ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಆಮದು ಶೇ 5ರಷ್ಟು ಇಳಿಕೆ

Published 6 ಡಿಸೆಂಬರ್ 2023, 14:44 IST
Last Updated 6 ಡಿಸೆಂಬರ್ 2023, 14:44 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ಆಮದು ಮಾಡಿಕೊಳ್ಳುವ ಕಲ್ಲಿದ್ದಲು ಪ್ರಮಾಣ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ಶೇ 5ರಷ್ಟು ಇಳಿಕೆಯಾಗಿ, 12.5 ಕೋಟಿ ಟನ್‌ಗೆ ತಲುಪಿದೆ.

ಲೋಕಸಭೆಯಲ್ಲಿ ಬುಧವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಕಲ್ಲಿದ್ದಲು ಮತ್ತು ಇಂಧನ ಸಚಿವ ಪ್ರಹ್ಲಾದ್‌ ಜೋಶಿ, ವಾರ್ಷಿಕ ಸಂಯುಕ್ತ ಬೆಳವಣಿಗೆ ದರದ (ಸಿಎಜಿಆರ್) ಪ್ರಕಾರ 15 ಕೋಟಿ ಟನ್‌ ಕಲ್ಲಿದ್ದಲಿನ ಆಮದು ಅಗತ್ಯವಿದೆ. ಆದರೆ ಪ್ರ‌ಸಕ್ತ ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ 12.5 ಕೋಟಿ ಟನ್‌ ಮಾತ್ರ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗಿದ್ದು, ಹಿಂದಿನ ಇದೇ ಅವಧಿಗೆ ಹೋಲಿಸಿದರೆ ಶೇ 5ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಕಲ್ಲಿದ್ದಲು ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಮೂಲಕ ಕಲ್ಲಿದ್ದಲು ಆಮದು ಮೇಲೆ ಅವಲಂಬಿತವಾಗುವುದನ್ನು ಕಡಿಮೆ ಮಾಡಲು ಯತ್ನಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

2022–23ರಲ್ಲಿ ಕಲ್ಲಿದ್ದಲು ಉತ್ಪಾದನೆ ಹಿಂದಿನ ವರ್ಷಕ್ಕಿಂತ ಶೇ 14.77ರಷ್ಟು ಹೆಚ್ಚಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 101 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆಯ ಗುರಿಯನ್ನು ಕೋಲ್‌ ಇಂಡಿಯಾ ಲಿಮಿಟೆಡ್‌ (ಸಿಐಎಲ್‌) ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT