ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಚಟುವಟಿಕೆ 3 ತಿಂಗಳ ಗರಿಷ್ಠಕ್ಕೆ ಏರಿಕೆ

Published 5 ಜನವರಿ 2024, 16:21 IST
Last Updated 5 ಜನವರಿ 2024, 16:21 IST
ಅಕ್ಷರ ಗಾತ್ರ

ನವದೆಹಲಿ: ಸದೃಢ ಆರ್ಥಿಕ ಪರಿಸ್ಥಿತಿ ಹಾಗೂ ಸಕಾರಾತ್ಮಕ ಬೇಡಿಕೆ ಪ್ರವೃತ್ತಿಯಿಂದಾಗಿ ಡಿಸೆಂಬರ್‌ನಲ್ಲಿ ದೇಶದ ಸೇವಾ ವಲಯದ ಚಟುವಟಿಕೆಯು ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿದೆ ಎಂದು ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ಸಂಸ್ಥೆ ತಿಳಿಸಿದೆ. 

ನವೆಂಬರ್‌ನಲ್ಲಿ 56.9 ಇದ್ದ ಸೂಚ್ಯಂಕವು ಡಿಸೆಂಬರ್‌ನಲ್ಲಿ 59ಕ್ಕೆ ಏರಿದೆ. ಇದು ಉತ್ಪಾದನೆಯಲ್ಲಿ ಹೆಚ್ಚಿದ ಏರಿಕೆಯನ್ನು ತೋರಿಸುತ್ತದೆ ಎಂದು ವರದಿ ತಿಳಿಸಿದೆ.

ಈ ಸೂಚ್ಯಂಕವು ಪಿಎಂಐ (ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌) 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಸಕಾರಾತ್ಮಕ ಬೆಳವಣಿಗೆ ಎಂದು ಕರೆಯಲಾಗುತ್ತದೆ. 50ಕ್ಕಿಂತಲೂ ಕೆಳಗಿನ ಮಟ್ಟದಲ್ಲಿ ಇದ್ದರೆ ನಕಾರಾತ್ಮಕ ಬೆಳವಣಿಗೆ ಎಂದು ಪರಿಗಣಿಸಲಾಗುತ್ತದೆ. 

‘2023ರಲ್ಲಿ ದೇಶದ ಸೇವಾ ವಲಯದಲ್ಲಿ ಹೆಚ್ಚಿದ ಹೊಸ ಆರ್ಡರ್‌ಗಳ ಸೂಚ್ಯಂಕದಿಂದ ವ್ಯಾಪಾರ ಚಟುವಟಿಕೆಗಳು ಏರುಗತಿ ಕಂಡಿವೆ’ ಎಂದು ಎಚ್‌ಎಸ್‌ಬಿಸಿಯ ಭಾರತದ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT