ಬುಧವಾರ, ಜೂನ್ 16, 2021
22 °C

ಲಸಿಕೆ ಹಾಕುವಿಕೆ ಒಂದು ಹಂತಕ್ಕೆ ಬಂದರೆ ಆರ್ಥಿಕತೆಯಲ್ಲಿ ಬೆಳವಣಿಗೆ: ಆಶಿಮಾ ಗೋಯಲ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ ಲಸಿಕೆ ಹಾಕಿಸುವ ಪ್ರಕ್ರಿಯೆಯು ಒಂದು ಹಂತಕ್ಕೆ ಬಂದ ಬಳಿಕ ದೇಶದ ಆರ್ಥಿಕತೆಯು ಉತ್ತಮ ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐನ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯೆ ಆಶಿಮಾ ಗೋಯಲ್‌ ಹೇಳಿದ್ದಾರೆ.

ಗರಿಷ್ಠ ಮಟ್ಟದ ಬೇಡಿಕೆ, ಜಾಗತಿಕ ಆರ್ಥಿಕತೆಯ ಚೇತರಿಕೆ ಮತ್ತು ಸುಲಭವಾದ ಹಣಕಾಸಿನ ಸ್ಥಿತಿಗಳು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲಿವೆ ಎಂದೂ ಅವರು ಹೇಳಿದ್ದಾರೆ.

ಲಾಕ್‌ಡೌನ್‌ಗಳಿಂದಾಗಿ ಆರ್ಥಿಕತೆಯ ಮೇಲೆ ಆಗಲಿರುವ ಹಾನಿಯು ತೀರಾ ಕಡಿಮೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ನಂತರವೂ ಇವು ವಿಸ್ತರಣೆ ಆಗುವ ಸಾಧ್ಯತೆ ಕಡಿಮೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತವು ಲಸಿಕೆ ಉತ್ಪಾದನೆಯ ಕೇಂದ್ರವಾಗಿ ಬೆಳೆಯುವ ಸಾಮರ್ಥ್ಯವನ್ನು ಹೊಂದಿದೆ. ಶೀಘ್ರವೇ ಉತ್ಪಾದನೆ ಹೆಚ್ಚಿಸಲು ಸಾಧ್ಯವಾಗಲಿದೆ. ಲಸಿಕೆ ಹಾಕಿಸುವಿಕೆಯು ಒಂದು ಹಂತಕ್ಕೆ ಬಂದ ನಂತರ, ಬೇಡಿಕೆಯಲ್ಲಿನ ಹೆಚ್ಚಳ, ಜಾಗತಿಕ ಆರ್ಥಿಕತೆಯ ಚೇತರಿಕೆ ಮತ್ತು ಸುಲಭವಾದ ಹಣಕಾಸು ಸ್ಥಿತಿಗಳಿಂದಾಗಿ ದೇಶಿ ಆರ್ಥಿಕತೆಯು ಉತ್ತಮ ಬೆಳವಣಿಗೆ ಕಾಣಲಿದೆ ಎಂದು ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು ತಿಳಿಸಿದ್ಧಾರೆ.

ಮುಂದುವರಿದ ಆರ್ಥಿಕತೆಗಳ ಗುಣಮಟ್ಟಕ್ಕೆ ಹೋಲಿಕೆ ಮಾಡಿದರೆ ಕೊರೊನೋತ್ತರ ಸಂದರ್ಭದಲ್ಲಿ ಭಾರತದ ವಿತ್ತೀಯ ವಿಸ್ತರಣೆಯು ಸಾಧಾರಣವಾಗಿರಲಿದೆ ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು