ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ ಇಳಿಕೆ

Published 17 ನವೆಂಬರ್ 2023, 20:02 IST
Last Updated 17 ನವೆಂಬರ್ 2023, 20:02 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ನವೆಂಬರ್ 10ಕ್ಕೆ ಕೊನೆಗೊಂಡ ವಾರದಲ್ಲಿ ₹3,846 ಕೋಟಿ ಕಡಿಮೆ ಆಗಿ ₹48.97 ಲಕ್ಷ ಕೋಟಿಗೆ ಇಳಿಕೆ ಕಂಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ತಿಳಿಸಿದೆ.

ಮೀಸಲು ಸಂಗ್ರಹದಲ್ಲಿ ವಿದೇಶಿ ಕರೆನ್ಸಿಗಳ ಪಾಲು ಹೆಚ್ಚಿನ ಮಟ್ಟದಲ್ಲಿದೆ. ನವೆಂಬರ್ 10ಕ್ಕೆ ಕೊನೆಗೊಂಡ ವಾರದಲ್ಲಿ ವಿದೇಶಿ ಕರೆನ್ಸಿಗಳ ಸಂಗ್ರಹವು ₹899 ಕೋಟಿಯಷ್ಟು ಹೆಚ್ಚಾಗಿ ₹43.32 ಲಕ್ಷ ಕೋಟಿಗೆ ತಲುಪಿದೆ ಎಂದು ಆರ್‌ಬಿಐ ಹೇಳಿದೆ.

ಚಿನ್ನದ ಮೀಸಲು ಸಂಗ್ರಹವು ₹5,061 ಕೋಟಿಯಷ್ಟು ಇಳಿಕೆ ಕಂಡು ₹3.77 ಲಕ್ಷ ಕೋಟಿಗೆ ಇಳಿಕೆ ಕಂಡಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಕರೆನ್ಸಿ ಸಂಗ್ರಹವು ₹24.90 ಕೋಟಿ ಹೆಚ್ಚಾಗಿ ₹ 39,757 ಕೋಟಿಗೆ ಏರಿಕೆ ಕಂಡಿದೆ ಎಂದು ಆರ್‌ಬಿಐ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT