ಬುಧವಾರ, ಜನವರಿ 22, 2020
28 °C

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಏರುಮುಖ ಹಾದಿಯಲ್ಲಿಯೇ ಸಾಗುತ್ತಿದ್ದು, ಹೊಸ ದಾಖಲೆ ಬರೆಯುತ್ತಿದೆ.

ಡಿಸೆಂಬರ್‌ 13ಕ್ಕೆ ಕೊನೆಗೊಂಡ ವಾರದಲ್ಲಿ ₹ 7,597 ಕೋಟಿ ಹೆಚ್ಚಾಗಿ ಹೊಸ ಎತ್ತರವಾದ ₹ 32.71 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮಾಹಿತಿ ನೀಡಿದೆ. ಅದಕ್ಕೂ ಹಿಂದಿನ ವಾರ ₹ 32.64 ಲಕ್ಷ ಕೋಟಿಗಳಿಗೆ ಏರಿಕೆಯಾಗಿತ್ತು.

ಮೀಸಲು ಸಂಗ್ರಹದಲ್ಲಿ ವಿದೇಶಿ ಕರೆನ್ಸಿಗಳ ಸಂಗ್ರಹವೇ ಹೆಚ್ಚಿನ ಪ್ರಮಾಣ ದಲ್ಲಿದೆ. ವಿದೇಶಿ ಕರೆನ್ಸಿಗಳ ಸಂಗ್ರಹವು ₹ 8,352 ಕೋಟಿ ಹೆಚ್ಚಾಗಿ, ₹ 30.41 ಲಕ್ಷ ಕೋಟಿಗಳಿಗೆ ತಲುಪಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು