ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ 8.1ರಷ್ಟು ಬೆಳವಣಿಗೆ’

Last Updated 22 ನವೆಂಬರ್ 2021, 14:09 IST
ಅಕ್ಷರ ಗಾತ್ರ

ಮುಂಬೈ:‍ಪ್ರಸಕ್ತ ಹಣಕಾಸು ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿ‍ಪಿ) ಬೆಳವಣಿಗೆ ದರವು ಶೇಕಡ 8.1ರಷ್ಟು ಇರಲಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಅಂದಾಜಿಸಿದೆ. ಮಾರ್ಚ್‌ 31ಕ್ಕೆ ಕೊನೆಗೊಳ್ಳಲಿರುವ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆಯು ಶೇ 9.3ರಿಂದ ಶೇ 9.6ರಷ್ಟು ಇರಲಿದೆ ಎಂದು ಅಂದಾಜು ಮಾಡಿದೆ.

ಜೂನ್‌ ತಿಂಗಳಿಗೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿ‍ಪಿಯು ಶೇ 20.1ರಷ್ಟು ಬೆಳವಣಿಗೆ ಕಂಡಿದೆ. ‘ಸೆಪ್ಟೆಂಬರ್‌ಗೆ ಕೊನೆಗೊಂಡ ಎರಡನೆಯ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಪ್ರಮಾಣವು ಶೇ 8.1ರಷ್ಟು ಆಗುವ ಅಂದಾಜು ಇದೆ’ ಎಂದು ಎಸ್‌ಬಿಐ ಸಿದ್ಧಪಡಿಸಿರುವ ಎಕೊವ್ರ್ಯಾಪ್ ವರದಿಯು ಹೇಳಿದೆ.

ಎರಡನೆಯ ತ್ರೈಮಾಸಿಕದಲ್ಲಿ ಶೇ 8.1ರಷ್ಟು ಬೆಳವಣಿಗೆ ಕಂಡರೆ ಅದು ಬೇರೆ ಯಾವುದೇ ದೇಶದ ಎರಡನೆಯ ತ್ರೈಮಾಸಿಕದ ಬೆಳವಣಿಗೆ ದರಕ್ಕಿಂತ ಹೆಚ್ಚು ಎಂದು ವರದಿಯಲ್ಲಿ ಹೇಳಲಾಗಿದೆ. ಇಡೀ ವರ್ಷದಲ್ಲಿ ದೇಶದ ಜಿಡಿಪಿ ಶೇ 9.3ರಿಂದ ಶೇ 9.6ರಷ್ಟು ಬೆಳವಣಿಗೆ ಸಾಧಿಸಿದರೆ, ಅದು ಕೋವಿಡ್‌ಗೂ ಮೊದಲಿನ ಮಟ್ಟಕ್ಕಿಂತ ಶೇ 1.5–1.7ರಷ್ಟು ಹೆಚ್ಚಿನದಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT