ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಿಂದ ಆಮದು ಮಾಡುವ ತೈಲ ಪ್ರಮಾಣ ಶೇ 1ಕ್ಕಿಂತಲೂ ಕಡಿಮೆ: ಹರ್ದೀಪ್ ಸಿಂಗ್ ಪುರಿ

Last Updated 21 ಮಾರ್ಚ್ 2022, 16:25 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ಆಮದು ಮಾಡಿಕೊಳ್ಳುವ ಒಟ್ಟು ಕಚ್ಚಾ ತೈಲದ ಪೈಕಿ ರಷ್ಯಾದಿಂದ ಆಮದಾಗುವ ತೈಲದ ಪ್ರಮಾಣ ಶೇ 1ಕ್ಕಿಂತಲೂ ಕಡಿಮೆ ಇದೆ. ಅಮೆರಿಕದಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣ ಕ್ರಮೇಣ ಹೆಚ್ಚಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘2020ರ ಏಪ್ರಿಲ್‌ನಲ್ಲಿ ಆರಂಭಗೊಂಡ ಹಣಕಾಸು ವರ್ಷದ ಮೊದಲ 10 ತಿಂಗಳುಗಳಲ್ಲಿ ಭಾರತವು ರಷ್ಯಾದಿಂದ 4,19,000 ಟನ್ ಕಚ್ಚಾ ತೈಲ ಆಮದು ಮಾಡಿಕೊಂಡಿತ್ತು. ಇದು ಆ ಅವಧಿಯಲ್ಲಿ ಆಮದು ಮಾಡಲಾದ ಒಟ್ಟು ಕಚ್ಚಾ ತೈಲದ (17.59 ಕೋಟಿ ಟನ್) ಶೇ 0.2ರಷ್ಟು’ ಎಂದು ಅವರು ತಿಳಿಸಿದ್ದಾರೆ.

ರಷ್ಯಾ ರಿಯಾಯಿತಿ ದರದಲ್ಲಿ ನೀಡುತ್ತಿರುವ ಕಚ್ಚಾ ತೈಲವನ್ನು ಖರೀದಿಸಲು ದೇಶದ ಕೆಲವು ತೈಲ ಕಂಪನಿಗಳು ಮುಂದಾಗಿರುವ ಬೆನ್ನಲ್ಲೇ ಸಚಿವರು ಈ ಮಾಹಿತಿ ನೀಡಿದ್ದಾರೆ. ‘ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) 30 ಲಕ್ಷ ಬ್ಯಾರೆಲ್, ಹಿಂದುಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ (ಎಚ್‌ಪಿಸಿಎಲ್) 20 ಲಕ್ಷ ಬ್ಯಾರೆಲ್‌ ಕಚ್ಚಾ ತೈಲ ಖರೀದಿಸಿವೆ.

‘ಪ್ರತಿ ದಿನ ಒಟ್ಟು 50 ಲಕ್ಷ ಬ್ಯಾರೆಲ್ ನಮಗೆ ಅಗತ್ಯವಿದೆ. ಇದರಲ್ಲಿ ಶೇ 60ರಷ್ಟು ಗಲ್ಫ್‌ನಿಂದ ಆಮದಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT