ಮಂಗಳವಾರ, ಮಾರ್ಚ್ 21, 2023
23 °C

ಸೆಪ್ಟೆಂಬರ್‌ ತ್ರೈಮಾಸಿಕ: ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಶೇ 22ರಷ್ಟು ಹೆಚ್ಚಳ

ಪಿಟಿಐ/ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹11,125 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹9,096 ಕೋಟಿ ಇತ್ತು. ಇದಕ್ಕೆ  ಹೋಲಿಸಿದರೆ ಈ ಬಾರಿಯ ಲಾಭವು ಶೇ 22.30ರಷ್ಟು ಹೆಚ್ಚಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಬ್ಯಾಂಕ್‌ನ ಒಟ್ಟು ವರಮಾನವು ₹38,754 ಕೋಟಿಯಿಂದ ₹46,182 ಕೋಟಿಗೆ ಏರಿಕೆ ಆಗಿದೆ. ನಿವ್ವಳ ಬಡ್ಡಿ ವರಮಾನ ₹21 ಸಾವಿರಕ್ಕೆ ತಲುಪಿದೆ.

ವೆಚ್ಚವು ₹22,947 ಕೋಟಿಯಿಂದ ₹28,790 ಕೋಟಿಗೆ ಏರಿಕೆ ಆಗಿದೆ. ರಿಟೇಲ್‌, ವಾಣಿಜ್ಯ ವಿಭಾಗವನ್ನು ಒಳಗೊಂಡು ಒಟ್ಟಾರೆ ಮುಂಗಡ ನೀಡಿಕೆಯು ಶೇ 23.4ರಷ್ಟು ಬೆಳವಣಿಗೆ ಕಂಡಿದೆ. ಠೇವಣಿ ಸಂಗ್ರಹದಲ್ಲಿ ಶೇ 19ರಷ್ಟು ಬೆಳವಣಿಗೆ ಸಾಧ್ಯವಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣವು ಶೇ 1.35 ರಿಂದ ಶೇ 1.23ಕ್ಕೆ ಇಳಿಕೆ ಕಂಡಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಸಾಲದ ಮೊತ್ತದ ಪ್ರಮಾಣವು ಶೇ 31.87 ರಿಂದ ಶೇ 32.40ಕ್ಕೆ ಅಲ್ಪ ಏರಿಕೆ ಕಂಡಿದೆ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು