ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ತಿಂಗಳ ಕನಿಷ್ಠ ಮಟ್ಟಕ್ಕೆ ತಯಾರಿಕಾ ಚಟುವಟಿಕೆ

Last Updated 1 ಜುಲೈ 2022, 14:27 IST
ಅಕ್ಷರ ಗಾತ್ರ

ನವದೆಹಲಿ: ದೇಶದ ತಯಾರಿಕಾ ವಲಯದ ಚಟುವಟಿಕೆಯು ಜೂನ್‌ನಲ್ಲಿ ಒಂಭತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಎಸ್‌ಆ್ಯಂಡ್‌ಪಿ ಗ್ಲೋಬಲ್‌ ಇಂಡಿಯಾ ಸಂಸ್ಥೆ ತಿಳಿಸಿದೆ.

ಬೆಲೆ ಏರಿಕೆಯ ಒತ್ತಡದಿಂದಾಗಿ ತಯಾರಿಕೆ ಮತ್ತು ಮಾರಾಟವು ಮಂದಗತಿಯ ಬೆಳವಣಿಗೆ ಕಂಡಿರುವುದೇ ಇದಕ್ಕೆ ಕಾರಣ ಎಂದು ಅದು ಹೇಳಿದೆ.

ಮ್ಯಾನುಫ್ಯಾಕ್ಚರಿಂಗ್‌ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ) ಮೇ ತಿಂಗಳಿನಲ್ಲಿ 54.6 ಇದ್ದಿದ್ದು ಜೂನ್‌ನಲ್ಲಿ 53.9ಕ್ಕೆ ಇಳಿಕೆ ಆಗಿದೆ. 2021ರ ಸೆಪ್ಟೆಂಬರ್‌ ಬಳಿಕದ ಅತ್ಯಂತ ಕಡಿಮೆ ಪ್ರಮಾಣದ ಬೆಳವಣಿಗೆ ಇದಾಗಿದೆ.

ವಲಯವು ಸತತ 12ನೇ ತಿಂಗಳಿನಲ್ಲಿಯೂ ಸಕಾರಾತ್ಮಕ ಮಟ್ಟದಲ್ಲಿಯೇ ಇದೆ. ಸೂಚ್ಯಂಕವು 50 ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಸಕಾರಾತ್ಮಕ ಬೆಳವಣಿಗೆ ಎಂದು ಪರಿಗಣಿಸಲಾಗುತ್ತದೆ.

ಬೆಲೆ ಏರಿಕೆಯ ಒತ್ತಡ, ಬಡ್ಡಿದರ ಹೆಚ್ಚಳ, ರೂಪಾಯಿ ಮೌಲ್ಯ ಇಳಿಕೆ ಮತ್ತು ಜಾಗತಿಕ ಬಿಕ್ಕಟ್ಟಿನ ನಡುವೆಯೂ ದೇಶದ ತಯಾರಿಕಾ ವಲಯದ 2022–23ನೇ ಹಣಕಾಸು ವರ್ಷದ ಮೊದಲಾರ್ಧದ ಬೆಳವಣಿಗೆ ಉತ್ತಮವಾಗಿದೆ ಎಂದು ಎಸ್‌ಆ್ಯಂಡ್‌ಪಿ ಗ್ಲೋಬಲ್‌ನ ಅರ್ಥಶಾಸ್ತ್ರದ ಸಹಾಯಕ ನಿರ್ದೇಶಕಿ ಪಾಲಿಯಾನ ಡಿ. ಲಿಮಾ ಹೇಳಿದ್ದಾರೆ.

ಹಣದುಬ್ಬರದ ಅತಿಯಾದ ಒತ್ತಡವು ಬೆಳವಣಿಗೆಯನ್ನು ಮಿತಿಗೊಳಿಸಿತು ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಕೆಲವರು ಹೇಳಿದ್ದಾರೆ. ಹಣದುಬ್ಬರವು ವಹಿವಾಟು ನಡೆಸುವ ವಿಶ್ವಾಸವನ್ನು 27 ತಿಂಗಳ ಕನಿಷ್ಠ ಮಟ್ಟಕ್ಕೆ ಕುಗ್ಗಿಸಿದೆ ಎಂದು ಸಂಸ್ಥೆಯು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT