ನವದೆಹಲಿ: ದೇಶದ ತಯಾರಿಕಾ ವಲಯದ ಚಟುವಟಿಕೆಯು ಸೆಪ್ಟೆಂಬರ್‌ನಲ್ಲಿ 8 ತಿಂಗಳ ಕನಿಷ್ಠ ಮಟ್ಟಕ್ಕೆ ದಾಖಲಾಗಿದೆ.
ಕೈಗಾರಿಕಾ ಉತ್ಪಾದನೆ, ಮಾರಾಟ ಮತ್ತು ಹೊಸ ರಫ್ತು ಆರ್ಡರ್‌ಗಳಲ್ಲಿ ಮಂದಗತಿಯಿಂದಾಗಿ ಸೂಚ್ಯಂಕವು ಇಳಿಕೆಯಾಗಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆಯ ವರದಿ ಮಂಗಳವಾರ ತಿಳಿಸಿದೆ.
ಎಚ್‌ಎಸ್‌ಬಿಸಿ ಇಂಡಿಯಾದ ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕದ (ಪಿಎಂಐ) ವರದಿ ಪ್ರಕಾರ, ಆಗಸ್ಟ್‌ನಲ್ಲಿ 57.5 ಇದ್ದ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 56.5ಕ್ಕೆ ಇಳಿದಿದೆ.
ತಯಾರಿಕಾ ವೆಚ್ಚ ಮತ್ತು ಮಾರಾಟ ಶುಲ್ಕದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ಖರೀದಿ ದರ ಹೆಚ್ಚಳವಾಗಿದೆ. ಕಾರ್ಮಿಕರ ವೆಚ್ಚ ಮತ್ತು ಬೇಡಿಕೆಯಿಂದಾಗಿ ತಯಾರಕರು ಶುಲ್ಕವನ್ನು ಏರಿಕೆ ಮಾಡಿದ್ದಾರೆ ಎಂದು ತಿಳಿಸಿದೆ.
‘ಲಾಭದ ಇಳಿಕೆಯು ಕಂಪನಿಗಳ ನೇಮಕಾತಿ ಮೇಲೆ ಪರಿಣಾಮ ಬೀರಿದೆ. ಮೂರನೇ ತಿಂಗಳು ಉದ್ಯೋಗ ಸೃಷ್ಟಿಯು ಮಂದಗತಿಯಲ್ಲಿದೆ’ ಎಂದು ಎಚ್‌ಎಸ್‌ಬಿಸಿಯ ಭಾರತದ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ಹೇಳಿದ್ದಾರೆ.