ಭಾನುವಾರ, ಅಕ್ಟೋಬರ್ 17, 2021
23 °C

ಚಿನ್ನ ಆಮದು 8 ಪಟ್ಟು ಹೆಚ್ಚಳ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಚಿನ್ನ ಆಮದು ಕಳೆದ ವರ್ಷದ ಸೆಪ್ಟೆಂಬರ್‌ಗೆ ಹೋಲಿಸಿದರೆ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಶೇಕಡ 658ರಷ್ಟು ಏರಿಕೆ ಕಂಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಹಬ್ಬದ ಋತುವಿಗಾಗಿ ಚಿನ್ನಾಭರಣ ವ್ಯಾಪಾರಿಗಳು ಹೆಚ್ಚಿನ ಖರೀದಿ ನಡೆಸಿರುವುದೇ ಆಮದು ಏರಿಕೆಗೆ ಕಾರಣ ಎಂದು ಮೂಲಗಳು ಹೇಳಿವೆ.

2020ರ ಸೆಪ್ಟೆಂಬರ್‌ನಲ್ಲಿ 12 ಟನ್‌ ಚಿನ್ನ ಆಮದು ಮಾಡಿಕೊಳ್ಳಲಾಗಿತ್ತು. 2021ರ ಸೆಪ್ಟೆಂಬರ್‌ನಲ್ಲಿ 91 ಟನ್‌ ಚಿನ್ನ ಆಮದು ಮಾಡಿಕೊಳ್ಳಲಾಗಿದೆ.

ಆಮದು ಹೆಚ್ಚಾಗಿರುವುದರಿಂದ ದೇಶದ ವ್ಯಾಪಾರ ಕೊರತೆ ಹೆಚ್ಚಾಗುವ ಮತ್ತು ರೂಪಾಯಿ ಮೇಲೆ ಒತ್ತಡ ಉಂಟಾಗುವ ಸಾಧ್ಯತೆ ಇದೆ ಎಂದೂ ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು