ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹೆಚ್ಚಳ: ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ಸೇವಾ ವಲಯದ ಚಟುವಟಿಕೆ

Last Updated 5 ಮೇ 2021, 11:46 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸೇವಾ ವಲಯದ ಚಟುವಟಿಕೆಗಳು ಏಪ್ರಿಲ್‌ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿವೆ. ಕೋವಿಡ್‌–19 ಸಾಂಕ್ರಾಮಿಕದ ಹೆಚ್ಚಳ ಮತ್ತು ಆರ್ಥಿಕ ಬೆಳವಣಿಗೆ ಬಗೆಗಿನ ಆಶಾವಾದ ತಗ್ಗಿರುವುದರಿಂದ ಚಟುವಟಿಕೆಗಳು ಇಳಿಕೆ ಕಾಣುವಂತಾಗಿದೆ ಎಂದು ಐಎಚ್‌ಎಸ್‌ ಮರ್ಕಿಟ್‌ ಹೇಳಿದೆ.

ಸೇವಾ ವಲಯದ ಬೆಳವಣಿಗೆಯನ್ನು ತಿಳಿಸುವ ಸೂಚ್ಯಂಕವು ಮಾರ್ಚ್‌ನಲ್ಲಿ 54.6ರಷ್ಟಿತ್ತು. ಇದು ಏಪ್ರಿಲ್‌ನಲ್ಲಿ 54ಕ್ಕೆ ಇಳಿಕೆ ಆಗಿದೆ. ಭಾರತದಲ್ಲಿ ಕೋವಿಡ್‌–19 ಬಿಕ್ಕಟ್ಟು ಹೆಚ್ಚುತ್ತಿರುವುದನ್ನು ಗಮನಿಸಿದರೆ ಏಪ್ರಿಲ್‌ ತಿಂಗಳ ಬೆಳವಣಿಗೆಯು ನಿರೀಕ್ಷೆಗಿಂತಲೂ ಉತ್ತಮವಾಗಿದೆ ಎಂದು ಐಎಚ್‌ಎಸ್‌ ಮರ್ಕಿಟ್‌ನ ಅರ್ಥಶಾಸ್ತ್ರದ ಸಹಾಯಕ ನಿರ್ದೇಶಕಿ ಪಾಲಿಯಾನಾ ಡಿ. ಲಿಮಾ ಹೇಳಿದ್ದಾರೆ.

ಮುಂಬರುವ ತಿಂಗಳುಗಳಲ್ಲಿ ಗರಿಷ್ಠ ಮಟ್ಟದ ಚಟುವಟಿಕೆಯನ್ನು ಕಂಪನಿಗಳು ನಿರೀಕ್ಷಿಸುತ್ತಿವೆ. ಆದರೆ, ಕೋವಿಡ್‌ಗೆ ಸಂಬಂಧಿಸಿದ ಆತಂಕವು ವ್ಯಾಪಾರ ನಡೆಸುವ ಮನೋಭಾವವನ್ನು ಕುಗ್ಗಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸ್ಪರ್ಧಾತ್ಮಕತೆ ಕಾಯ್ದುಕೊಳ್ಳುವ ಮತ್ತು ಹೊಸ ಯೋಜನೆಗಳನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಶೇಕಡ 98ರಷ್ಟು ಕಂಪನಿಗಳು ವೆಚ್ಚ ಹೆಚ್ಚಳದ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಿಲ್ಲ. ಕೆಲವೇ ಕೆಲವು ಕಂಪನಿಗಳು ಮಾತ್ರವೇ ಮಾರಾಟದ ದರದಲ್ಲಿ ಏರಿಕೆ ಮಾಡಿವೆ. ಕೋವಿಡ್–19 ಬಿಕ್ಕಟ್ಟು ಮತ್ತು ಪ್ರಯಾಣ ನಿರ್ಬಂಧಗಳು ಭಾರತದ ಸೇವೆಗಳಿಗೆ ಅಂತರರಾಷ್ಟ್ರೀಯ ಬೇಡಿಕೆಯನ್ನು ತಗ್ಗಿಸುತ್ತಿವೆ. ರಫ್ತು ವಹಿವಾಟು ಸತತ 14ನೇ ತಿಂಗಳಿನಲ್ಲಿಯೂ ಇಳಿಕೆ ಕಂಡಿದೆ ಎಂದು ಸಂಸ್ಥೆಯು ತಿಳಿಸಿದೆ.

ತಯಾರಿಕೆ ಮತ್ತು ಸೇವಾ ವಲಯದ ಒಟ್ಟಾರೆ ಚಟುವಟಿಕೆಗಳನ್ನು ಸೂಚಿಸುವ ಕಂಪೋಸಿಟ್‌ ಪಿಎಂಐ ಔಟ್‌ಪುಟ್‌ ಸೂಚ್ಯಂಕವು 56 ರಿಂದ 55.4ಕ್ಕೆ ಇಳಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT