ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 6.13 ಲಕ್ಷ ಕೋಟಿ ಪರೋಕ್ಷ ತೆರಿಗೆ ಸಂಗ್ರಹ: ಶುಕ್ಲಾ

Last Updated 4 ಜನವರಿ 2019, 16:51 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ – ನವೆಂಬರ್‌ ಅವಧಿಯಲ್ಲಿ ₹ 6.12 ಲಕ್ಷ ಕೋಟಿಗಳಷ್ಟು ಪರೋಕ್ಷ ತೆರಿಗೆ ಸಂಗ್ರಹವಾಗಿದೆ.

‘2018–19ನೆ ಹಣಕಾಸು ವರ್ಷದಲ್ಲಿ ಕೇಂದ್ರೀಯ ಜಿಎಸ್‌ಟಿ, ಸಮಗ್ರ ಜಿಎಸ್‌ಟಿ ಮತ್ತು ಪರಿಹಾರ ಸೆಸ್‌ ಒಳಗೊಂಡಂತೆ ₹ 11.16 ಲಕ್ಷ ಕೋಟಿ ಪರೋಕ್ಷ ತೆರಿಗೆ ಸಂಗ್ರಹದ ಗುರಿ ನಿಗದಿಪಡಿಸಲಾಗಿದೆ’ ಎಂದು ಹಣಕಾಸು ರಾಜ್ಯ ಸಚಿವ ಶಿವ ಪ್ರತಾಪ್‌ ಶುಕ್ಲಾ ಅವರು ಶುಕ್ರವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

‘ಬಜೆಟ್‌ನಲ್ಲಿ ಅಂದಾಜಿಸಿರುವ ತೆರಿಗೆ ಸಂಗ್ರಹದ ಗುರಿ ತಲುಪಲು ಸರ್ಕಾರ ಜಿಎಸ್‌ಟಿ ದರಗಳ ಸರಳೀಕರಣ, ಕಡ್ಡಾಯ ಇ–ಫೈಲಿಂಗ್‌, ಇ–ಪಾವತಿ, ವಿಳಂಬ ಪಾವತಿಗೆ ದಂಡ ಮತ್ತಿತರ ಕ್ರಮಗಳನ್ನು ಕೈಗೊಂಡಿದೆ. ಸಂಗ್ರಹವಾದ ಒಟ್ಟಾರೆ ಪರೋಕ್ಷ ತೆರಿಗೆಯ ಪ್ರಮಾಣವು ಹಣಕಾಸು ವರ್ಷದ ಅಂತ್ಯದ ವೇಳೆಗೆ ಖಚಿತವಾಗಿ ತಿಳಿದು ಬರಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT