ನವದೆಹಲಿ: ಡಿಜಿಟಲ್ ಪಾವತಿ (ಇಂಟರ್ನೆಟ್ ಬ್ಯಾಂಕಿಂಗ್, ಕಾರ್ಡ್ ಮೂಲಕ ನಡೆದ ಪಾವತಿ) ಮೂಲಕ ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ 13,384 ವಂಚನೆ ಪ್ರಕರಣಗಳು ನಡೆದಿವೆ. ಜನರು ₹107 ಕೋಟಿ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2023–24ರ ಪೂರ್ಣ ಆರ್ಥಿಕ ವರ್ಷದಲ್ಲಿ 29,082 ವಂಚನೆ ಪ್ರಕರಣ ನಡೆದಿದ್ದವು. ಇದರ ಮೊತ್ತ ₹177 ಕೋಟಿಯಾಗಿದೆ ಎಂದು ತಿಳಿಸಿದೆ.

ಡಿಜಿಟಲ್ ಪಾವತಿ ವಹಿವಾಟು ಹೆಚ್ಚಳದಿಂದ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಮೂಡಿಸಲು ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಲೋಕಸಭೆಗೆ ಕೇಂದ್ರ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.