ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಜಿಲ್ಲೆಗೊಂದು ಕೈಗಾರಿಕಾ ಪಾರ್ಕ್‌: ಸಚಿವ ನಿರಾಣಿ

Last Updated 29 ಸೆಪ್ಟೆಂಬರ್ 2021, 17:36 IST
ಅಕ್ಷರ ಗಾತ್ರ

ಬೆಳಗಾವಿ: ‘ಒಂದು ಜಿಲ್ಲೆ ಒಂದು ಉತ್ಪಾದನೆ’ ಕಾರ್ಯಕ್ರಮದಲ್ಲಿ ಪ್ರತಿ ಜಿಲ್ಲೆಯಲ್ಲೊಂದು ಕೈಗಾರಿಕಾ ಪಾರ್ಕ್‌ ಮಾಡ ಲಾಗುವುದು’ ಎಂದು ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಇಲ್ಲಿ ಬುಧವಾರ ಮಾತನಾಡಿದ ಅವರು, ‘ಯಾದಗಿರಿಯಲ್ಲಿ ಫಾರ್ಮಾ ಪಾರ್ಕ್‌ ಮಾಡಲಾಗುತ್ತಿದೆ. ಅಲ್ಲಿಗೆ ಕೇಂದ್ರ ಸರ್ಕಾರ ₹ 1ಸಾವಿರ ಕೋಟಿ ಕೊಡುತ್ತಿದೆ. 3 ಸಾವಿರ ಎಕರೆ ಸ್ವಾಧೀನ ಪಡಿಸಿಕೊಂಡಿದ್ದು, 80ಕ್ಕೂ ಹೆಚ್ಚು ಔಷಧಿ ಕಂಪನಿಗಳ ಕೈಗಾರಿಕೆಗಳು ಬರಲಿವೆ’ ಎಂದು ಹೇಳಿದರು.

‘ಕಲಬುರ್ಗಿಯಲ್ಲಿ ಜವಳಿ ಮತ್ತು ಜ್ಯುವೆಲ್ಲರಿ ಪಾರ್ಕ್‌, ಹುಬ್ಬಳ್ಳಿ–ಧಾರವಾಡದಲ್ಲಿ ಐಟಿ ಪಾರ್ಕ್‌, ತುಮಕೂರು ಮತ್ತು ಧಾರವಾಡದಲ್ಲಿ ಕೈಗಾರಿಕಾ ಕಾರಿಡಾರ್ ಮಾಡಲಾಗುತ್ತಿದೆ. ಪ್ರತಿ ಕಾರಿಡಾರ್‌ಗೆ ಕೇಂದ್ರ ಸರ್ಕಾರ ತಲಾ ₹ 1 ಸಾವಿರ ಕೋಟಿ ಅನುದಾನ ಕೊಡುತ್ತಿದೆ’ ಎಂದು ಮಾಹಿತಿ ನೀಡಿದರು.

‘ಎಂಜಿನಿಯರಿಂಗ್‌, ಎಂ.ಟೆಕ್. ಹಾಗೂ ಪಿಎಚ್‌.ಡಿ ಪಡೆದವರು ಉದ್ಯಮಿಗಳಾಗಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ನೀಡುವ ಕಾರ್ಯಕ್ರಮವನ್ನು ಇಲಾಖೆಯಿಂದ ನಡೆಸಲಾಗುವುದು. ಕಲಬುರ್ಗಿ, ಮೈಸೂರು, ಬೆಳಗಾವಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ ಹಾಗೂ ಮಂಗಳೂರಿನಲ್ಲಿ ತಲಾ ಎರಡು ದಿನಗಳ ಕಾರ್ಯಕ್ರಮ ನಡೆಯಲಿದೆ. ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT