ಮಂಗಳವಾರ, ಅಕ್ಟೋಬರ್ 19, 2021
25 °C

ಆಗಸ್ಟ್‌ನಲ್ಲಿ ಕೈಗಾರಿಕಾ ಉತ್ಪಾದನೆ ಶೇ 11.9ರಷ್ಟು ಬೆಳವಣಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ಕೈಗಾರಿಕಾ ವಲಯದ ಉತ್ಪಾದನೆಯು ಆಗಸ್ಟ್‌ನಲ್ಲಿ ಶೇ 11.9ರಷ್ಟು ಬೆಳವಣಿಗೆ ಕಂಡಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮಾಹಿತಿ ನೀಡಿದೆ.

ಎನ್‌ಎಸ್‌ಒ ಮಂಗಳವಾರ ಬಿಡುಗಡೆ ಮಾಡಿರುವ ಕೈಗಾರಿಕಾ ಉತ್ಪಾದನಾ ಸೂಚ್ಯಂಕದ (ಐಐಪಿ) ಅಂಕಿ–ಅಂಶಗಳ ಪ್ರಕಾರ, ತಯಾರಿಕಾ ವಲಯದ ಬೆಳವಣಿಗೆಯು ಶೇ 9.7ಕ್ಕೆ ಏರಿಕೆ ಆಗಿದೆ.

ಗಣಿಗಾರಿಕೆಯ ಉತ್ಪಾದನೆಯು ಶೇ 23.6 ರಷ್ಟು ಮತ್ತು ವಿದ್ಯುತ್‌ ಉತ್ಪಾದನೆಯು ಶೇ 16ರಷ್ಟು ಹೆಚ್ಚಾಗಿದೆ.

2020ರ ಆಗಸ್ಟ್‌ನಲ್ಲಿ ಐಐಪಿ ಶೇ 7.1ರಷ್ಟು ಇಳಿಕೆ ಕಂಡಿತ್ತು. ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ಐಯಪಿ ಶೇ 28.6ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷ ಶೇ 25ರಷ್ಟು ಕುಸಿದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು